spot_img
Monday, April 6, 2026
spot_img

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ : ರಾಜಧಾನಿ ಸೇರಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಜನಪ್ರತಿನಿಧಿ ವಾರ್ತೆ( ಬೆಂಗಳೂರು) : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಇಂದು (ಬುಧವಾರ) ದಾಳಿ ಮಾಡಿದೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ರಾಜಧಾನಿ ಒಳಗೊಂಡು ರಾಜ್ಯದ ಹಲವೆಡೆ  ದಾಳಿ ನಡೆಸಿದೆ ಎಂದು ಮಾಹಿತಿ ತಿಳಿದುಬಂದಿದೆ.

ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ ಮೂಲಗಳು ಮಾಹಿತಿ ಒದಗಿ ಬಂದಿದೆ.ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ.

ಇನ್ನು, ಮಂಡ್ಯದಲ್ಲಿ ಪಿಡಬ್ಲ್ಯುಡಿ ಇಲಾಖೆ ಇಇ ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ ಎಂದುಯ ತಿಳಿದು ಬಂದಿದೆ.

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಮಾಹಿತಿ ತಿಳಿದುಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!