spot_img
Monday, April 6, 2026
spot_img

ಕೇಂದ್ರ ಬಜೆಟ್‌ 2024-25: ದ್ರೌಪದಿ ಮುರ್ಮು ಭಾಷಣ, ಸೀತಾರಾಮನ್ ಬಜೆಟ್ ಮಂಡನೆ ‘ನಾರಿ ಶಕ್ತಿ’ ಹಬ್ಬ : ಪ್ರಧಾನಿ ನರೇಂದ್ರ ಮೋದಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ತಮ್ಮ ಅಶಿಸ್ತಿನ ವರ್ತನೆಯಿಂದಾಗಿ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿರುವ ವಿರೋಧ ಪಕ್ಷದ ಸಂಸದರನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ  ಇಂದು(ಬುಧವಾರ) ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ್ದಾರೆ.  

ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಕೆ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ ಇದು ಅವರ ಅಭ್ಯಾಸವಾಗಿರಬಹುದು, ಆದರೆ, ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು ಎಂದು ಹೇಳಿದರು.

ಅಧಿವೇಶನದಲ್ಲಿ ವಿರೋಧ ಪಕ್ಷಗಳು ಧ್ವನಿ ಎತ್ತಿದೆ, ಆದರೆ, ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಅದು ಸಂಸತ್ತಿನ ಸಮಯಕ್ಕೆ ಹಾಗೂ ಚರ್ಚೆಗೆ ತೊಂದರೆ ಮಾಡಬಹುದು. ಈ ದೇಶಕ್ಕೆ ಅಥವಾ ನಮಗೆ ಬೆಳಕು ಚೆಲ್ಲುವವರನ್ನು ಆತ್ಮೀಯವಾಗಿ ಸ್ಮರಿಸಲಾಗುವುದು. ಸಂಸತ್ತಿನಲ್ಲಿ ವಿಷಾದಿಸುವ ಅವಕಾಶವಿದೆ. ಇದನ್ನು ಬಿಡಬೇಡಿ ಎಂದು ತಿಳಿಸಿದರು.

ರಾಷ್ಟ್ರಪತಿ ಮುರ್ಮು ಅವರು ಜಂಟಿ ಸಭೆಯನ್ನುದ್ದೇಶಿಸಿ ಮಾಡುವ ಭಾಷಣ ಮಾಡುತ್ತಿರುವುದು ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಿರುವುದು ‘ನಾರಿ ಶಕ್ತಿ’ (ಮಹಿಳಾ ಸಬಲೀಕರಣ) ಹಬ್ಬ ಎಂದು ಅವರು ಬಿಂಬಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ ಬಗ್ಗೆ ಸ್ಮರಿಸಿದ ಪ್ರಧಾನಿ ಮೋದಿ, “ಈ ಹೊಸ ಸಂಸತ್ತಿನ ಕಟ್ಟಡದಲ್ಲಿ ಕರೆಯಲಾದ ಮೊದಲ ಅಧಿವೇಶನದ ಕೊನೆಯಲ್ಲಿ, . ನಾರಿ ಶಕ್ತಿ ವಂದನ್ ಅಧಿನಿಯಮ್ ಎಂಬ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿತು. ಜನವರಿ 26 ರಂದು ದೇಶವು ‘ನಾರಿ ಶಕ್ತಿ’ಯ ಸಾಮರ್ಥ್ಯವನ್ನು, ಅದರ ಶೌರ್ಯ, ಅದರ ಸಂಕಲ್ಪದ ಶಕ್ತಿಯನ್ನು ಹೇಗೆ ಅನುಭವಿಸಿತು ಎಂಬುದನ್ನು ನಾವು ನೋಡಿದ್ದೇವೆ. ಇದು ಅಭಿವೃದ್ಧಿಶೀಲ ಕಥೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!