spot_img
Monday, April 6, 2026
spot_img

ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ವೇಳೆ ರಾಹುಲ್‌ ಗಾಂಧಿ ಇದ್ದ ಕಾರಿಗೆ ಕಲ್ಲು ತೂರಾಟ !

ಜನಪ್ರತಿನಿಧಿ ವಾರ್ತೆ (ಕೊಲ್ಕತ್ತಾ) : ಭಾರತ್ ಜೋಡೊ ನ್ಯಾಯ್‌ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ದಾಳಿ ನಡೆಸಲಾಗಿದೆ. ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಂದು(ಬುಧವಾರ) ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಭಾರೀ ಜನಸಂದಣಿಯ ನಡುವೆ ಮಾಲ್ದಾ ಜಿಲ್ಲೆಯಲ್ಲಿ ಸಾಗುತ್ತಿದ್ದ ರಾಹುಲ್ ಗಾಂಧಿಯವರ ಕಾರಿಗೆ ಕಲ್ಲುತೂರಾಟ ಮಾಡಲಾಗಿದೆ. ಘಟನೆಯಲ್ಲಿ ಕಾರಿನ ಗಾಜುಗಳು ಹಾನಿಯಾಗಿವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದ್ದು, ಆದರೆ ಯಾವುದೇ ಗಾಯಗಳಾಗಿಲ್ಲ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಘಟನೆಯ ದೃಶ್ಯಗಳಲ್ಲಿ ರಾಹುಲ್ ಗಾಂಧಿಯವರು ತಮ್ಮ ವಾಹನದಿಂದ ಹೊರಬಂದ ನಂತರ ಹಾನಿಗೊಳಗಾದ ಭಾಗವನ್ನು ಪರಿಶೀಲಿಸುತ್ತಿರುವುದನ್ನು ಕಾಣಬಹುದಾಗಿದೆ.

ಇನ್ನು, ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯು ಬಿಹಾರದಿಂದ ಪಶ್ಚಿಮ ಬಂಗಾಳಕ್ಕೆ ಮರು ಪ್ರವೇಶಿಸುತ್ತಿದ್ದಂತೆ ಮಾಲ್ಡಾದ ಹರಿಶ್ಚಂದ್ರಪುರ ಪ್ರದೇಶದಲ್ಲಿ ಈ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!