spot_img
Thursday, April 2, 2026
spot_img

ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿಸಿದ ವಾರಣಾಸಿ ನ್ಯಾಯಾಲಯ !

ಜನಪ್ರತಿನಿಧಿ ವಾರ್ತೆ (ವಾರಣಾಸಿ) : ವಿವಾದಿತ ವಾರಾಣಸಿಯ ಜ್ಞಾನವಾಪಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಅರ್ಜಿದಾರರಿಗೆ ಇಂದು(ಬುಧವಾರ) ಮೊದಲ ಹಂತದ ಗೆಲುವು ಸಿಕ್ಕಂತಾಗಿದೆ. ಹಿಂದೂ ಧರ್ಮದವರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ವಾರಾಣಸಿಯ ನ್ಯಾಯಾಲಯ ಅನುಮತಿ ನೀಡಿ ಆದೇಶಿಸಿದೆ.

ಜ್ಞಾನವಾಪಿ ಮಸೀದಿಯ ಕೆಳಗಿರುವ 10 ಮೊಹರು ನೆಲಮಾಳಿಗೆಗಳಲ್ಲಿ ಹಿಂದೂ ಪೂಜೆಗಳು ಇನ್ನು 7 ದಿನಗಳಲ್ಲಿ ಪ್ರಾರಂಭವಾಗಲಿವೆ. ಇದಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ನ್ಯಾಯಾಲಯ ಸೂಚಿಸಿದೆ.

ಹಿಂದೂ ಕಡೆಯವರು ‘ವ್ಯಾಸ್ ಕಾ ತೆಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದೆ. ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಿದೆ” ಎಂದು ಹಿಂದೂ ಪರ ಅರ್ಜಿದಾರರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಪುರಾತತ್ವ ಇಲಾಖೆ ಮಸೀದಿಯಲ್ಲಿ ಇತ್ತೀಚೆಗಷ್ಟೇ ಸಮೀಕ್ಷೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಮಂದಿರವನ್ನು ಕೆಡವಿ ಮಸೀದಿ ಕಟ್ಟಲಾಗಿಲ್ಲ, ಮಂದಿರದ ಮೇಲ್ಗಡೆ ಮಸೀದಿ ರಚನೆ ಮಾಡಲಾಗಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!