Sunday, September 8, 2024

ಕಾಂಗ್ರೆಸ್‌ಗೆ ಒಂದೇ ಒಂದು ಕ್ಷೇತ್ರವನ್ನು ಬಿಟ್ಟುಕೊಡಲ್ಲ : ದೀದಿ

ಜನಪ್ರತಿನಿಧಿ ವಾರ್ತೆ (ಕೋಲ್ಕತಾ): ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಕುರಿತಾಗಿ ಇದ್ ಜಟಾಪಟಿ ಮುಂದುವರೆದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಕ್ಷೇತ್ರವನ್ನೂ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು(ಬುಧವಾರ) ಹೇಳಿದ್ದಾರೆ.

“ನಾವು ಕಾಂಗ್ರೆಸ್ ಪಕ್ಷಕ್ಕೆ ಮಾಲ್ಡಾದಲ್ಲಿ ಎರಡು ಕ್ಷೇತ್ರಗಳನ್ನು ಬಿಟ್ಟುಕೊಡುವ ಪ್ರಸ್ತಾಪ ಮಾಡಿದ್ದೆವು. ಆದರೆ, ಕಾಂಗ್ರೆಸ್ ಅದನ್ನು ಒಪ್ಪಲಿಲ್ಲ. ಈಗ ಅವರಿಗೆ ರಾಜ್ಯದಲ್ಲಿ ಒಂದೇ ಒಂದು ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ” ಎಂದು ಮಮತಾ ಒತ್ತಿ ಹೇಳಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ)ದಿಂದಾಗಿ ಕಾಂಗ್ರೆಸ್ ಪಕ್ಷದೊಂದಿಗಿನ ತಮ್ಮ ಉತ್ತಮ ಸಂಬಂಧ ಕ್ರಮೇಣ ಹೇಗೆ ಹದಗೆಟ್ಟಿತು ಎಂಬುದರ ಕುರಿತು ಮಮತಾ ಮಾತನಾಡಿದ್ದಾರೆ.

“ಸಿಪಿಎಂ ಬಿಜೆಪಿಯ ನಂಬರ್ ಒನ್ ಬ್ರೋಕರ್, ನಾನು ಸಿಪಿಎಂನಿಂದ ಸಾಕಷ್ಟು ಹೊಡೆತ ತಿಂದಿದ್ದೇನೆ ಹಾಗೂ ಅದನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ನಾನು ಕಾಂಗ್ರೆಸ್‌ನೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಸಿಪಿಎಂನಿಂದಾಗಿ ಕಾಂಗ್ರೆಸ್ ಪಕ್ಷದೊಂದಿಗಿನ ನನ್ನ ಸಂಬಂಧ ಹದಗೆಟ್ಟಿದೆ” ಎಂದು ಅವರು ಹೇಳಿದ್ದಾರೆ.

ಈ ನಡುವೆ, ಪ್ರಮುಖ ಮಿತ್ರ ಪಕ್ಷ ಟಿಎಂಸಿಯನ್ನು ʼಇಂಡಿಯಾʼ ಮೈತ್ರಿಕೂಟದಲ್ಲಿ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್, “ಪಶ್ಚಿಮ ಬಂಗಾಳದಲ್ಲಿ ʼಇಂಡಿಯಾʼ ಮೈತ್ರಿಕೂಟದ ಸೀಟು ಹಂಚಿಕೆಯನ್ನು ತಡೆಹಿಡಿಯಲಾಗಿದೆ. ಟಿಎಂಸಿ ಹಾಗೂ ಕಾಂಗ್ರೆಸ್ ಪ್ರಸ್ತಾಪವನ್ನು ಪರಿಗಣಿಸುತ್ತಿವೆ. ಟಿಎಂಸಿ ಇನ್ನೂ ʼಇಂಡಿಯಾʼ ಮೈತ್ರಿಕೂಟದ ಭಾಗವಾಗಿದೆ” ಎಂದು ಕಾಂಗ್ರೆಸ್ ಮೂಲಗಳು ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!