spot_img
Thursday, April 2, 2026
spot_img

ಕೇಂದ್ರ ಬಜೆಟ್‌ ಮಂಡನೆಗೆ ಕ್ಷಣಗಣನೆ : ಬೆಳಗ್ಗೆ 11ಗಂಟೆಗೆ ಮಧ್ಯಂತರ ಬಜೆಟ್‌ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್‌ ಗೆ ಮಂಡನೆಗೆ ಕ್ಷಣಗಣನೆ ಆರಂಭಗೊಂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿತ್ತ ಸಚಿವಾಲಯಕ್ಕೆ ಆಗಮಿಸಿದ್ದು, ಇಂದು( ಗುರುವಾರ, ಫೆ.01) ಬೆಳಗ್ಗೆ 11ಗಂಟೆಗೆ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ.

ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್‌ ಆಗಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಮಂಡನೆಯಾಗುತ್ತಿರುವ ಮಧ್ಯಂತರ ಬಜೆಟ್‌ ನಲ್ಲಿ ಬಂಪರ್‌ ಘೋಷಣೆಗಳ ನಿರೀಕ್ಷೆ ಹೆಚ್ಚಾಗಿದೆ.

ಮಧ್ಯಂತರ ಬಜೆಟ್‌ ಈಗ ಮಂಡನೆಯಾಗಲಿದ್ದು, ಲೋಕಸಭೆ ಚುನಾವಣೆ ಬಳಿಕ ನೂತನ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್‌ ನಲ್ಲಿ ಬೃಹತ್‌ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಇಂದು( ಗುರುವಾರ, ಫೆ.01) 6ನೇ ಬಜೆಟ್‌ ಮಂಡಿಸುತ್ತಿದ್ದಾರೆ. 2023ನೇ ಸಾಲಿನ ಬಜೆಟ್‌ ನಲ್ಲಿ 45,03,097 ಕೋಟಿ ರೂಪಾಯಿ ಗಾತ್ರದ ಬೃಹತ್‌ ಮೊತ್ತದ ಬಜೆಟ್‌ನನು ಅವರು ಮಂಡಿಸಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!