spot_img
Wednesday, January 22, 2025
spot_img

ಕೇಂದ್ರ ಬಜೆಟ್ : ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ : ವಿತ್ತ ಸಚಿವೆ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಳಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸುತ್ತೇವೆಂದು ಅವರು ಹೇಳಿದ್ದಾರೆ.

ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ನ್ನು ಇಂದು ಮಂಡನೆ ಮಾಡಿದ್ದು,  ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆಯಾಗಿ ನಿರ್ಮಲಾ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ಕಾರ್ಯ ನಿರ್ವಹಿಸಿದ ದೇಶದ ಮೊಟ್ಟ ಮೊದಲ ಮಹಿಳೆ ಎಂಬ ಖ್ಯಾತಿಗೂ ಅವರು ಭಾಜೀನರಾಗಿದ್ದಾರೆ.

ಸತತ ಐದು ಬಜೆಟ್‌ಗಳನ್ನು ಮಂಡಿಸಿರುವ ಮನಮೋಹನ್ ಸಿಂಗ್‌, ಅರುಣ್‌ ಜೇಟ್ಲಿ, ಪಿ.ಚಿದಂಬರಂ ಮತ್ತು ಯಶವಂತ್‌ ಸಿನ್ಹಾ ಅವರ ದಾಖಲೆಗಳನ್ನೂ ನಿರ್ಮಲಾ ಸೀತಾರಾಮನ್ ಅವರು ಮುರಿದಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆ (ಬುಧವಾರ) ಆರಂಭ ಪಡೆಯಿತು.

ಇನ್ನು, ಈ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.

ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ.

ಬಜೆಟ್‌ ಅಧಿವೇಶನದಲ್ಲಿ ನಿರ್ಮಲಾ ನೀತಾರಾಮನ್‌ ಏನಂದ್ರು ?

ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭವಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ. 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. ಪ್ರಮುಖವಾಗಿ 2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಮಾಡಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ ಮತ್ತು ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಇತ್ತ ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ. ಪ್ರಮುಖವಾಗಿ ತ್ರಿವಳಿ ತಲಾಖ್ ನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ವಿಕಸಿತ ಭಾರತಕ್ಕೆ ರಾಜ್ಯಗಳಲ್ಲಿ ಸುಧಾರಣೆಗಳು ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಕ್ರಿಯಗೊಳಿಸುವ ಸುಧಾರಣೆಗಳು ರಾಜ್ಯಗಳಲ್ಲಿ ಅಗತ್ಯವಿದೆ ರಾಜ್ಯ ಸರ್ಕಾರಗಳ ಮೈಲಿಗಲ್ಲು ಸಂಬಂಧಿತ ಸುಧಾರಣೆಗಳನ್ನು ಬೆಂಬಲಿಸಲು ಈ ವರ್ಷ 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ 75,000 ಕೋಟಿ ರೂಪಾಯಿಗಳನ್ನು ಒದಗಿಸಲು ಪ್ರಸ್ತಾಪಿಸಲಾಗಿದೆ.

ಕೃಷಿ ಮತ್ತು ಆಹಾರ ಸಂಸ್ಕರಣೆ ಮೌಲ್ಯವರ್ಧನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳನ್ನು ಮಾಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಯು 38 ಲಕ್ಷ ರೈತರಿಗೆ ಪ್ರಯೋಜನವನ್ನು ನೀಡಿದೆ ಮತ್ತು 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ ಪ್ರಧಾನಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ ಯೋಜನೆಯು 2.4 ಲಕ್ಷ ಸ್ವಸಹಾಯ ಗುಂಪುಗಳು ಹಾಗೂ 60 ಸಾವಿರ ವ್ಯಕ್ತಿಗಳಿಗೆ ಕ್ರೆಡಿಟ್ ಲಿಂಕ್‌ಗಳೊಂದಿಗೆ ಸಹಾಯ ಮಾಡಿದೆ ಇತರ ಯೋಜನೆಗಳು ಸುಗ್ಗಿಯ ನಂತರದ ನಷ್ಟವನ್ನು ಕಡಿಮೆ ಮಾಡಲು ಮತ್ತು ಉತ್ಪಾದಕತೆ ಮತ್ತು ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತಿವೆ.

ಆಯುಷ್ಮಾನ್ ಭಾರತ್ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಿಸಲಾಗುವುದು.

7 ಲಕ್ಷ ಆದಾಯ ಇರೋರಿಗೆ ತೆರಿಗೆ ವಿನಾಯಿತಿ

  • 7 ಲಕ್ಷ ಆದಾಯ ಇರೋರಿಗೆ ತೆರಿಗೆ ವಿನಾಯಿತಿ! 
  • ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು 
  • 3 ಪ್ರಮುಖ ರೈಲ್ವೆ ಕಾರಿಡಾರ್ ನಿರ್ಮಾಣ 
  • ಜನಸಂಖ್ಯೆ ಏರಿಕೆ ನಿಯಂತ್ರಣಕ್ಕೆ ಸಮಿತಿ ರಚನೆ
  • ಹೊಸ ಹೆದ್ದಾರಿಗಳ ನಿರ್ಮಾಣಕ್ಕೆ ನೀಲನಕ್ಷೆ

ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ

ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ.

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಹೆಚ್ಚು

10 ವರ್ಷಗಳಲ್ಲಿ ಉನ್ನತ ಶಿಕ್ಷಣಕ್ಕೆ ಶೇ.28 ರಷ್ಟು ಮಹಿಳೆಯರು ದಾಖಲಾಗಿದ್ದಾರೆ. ಒನ್ ನೇಷನ್ ಒನ್ ಮಾರ್ಕೆಟ್ ಜಾರಿ ಪಿಎಂ ಆವಾಸ್ ಯೋಜನೆಯಲ್ಲಿ ಶೇ.70 ರಷ್ಟು ಮನೆ ನಿರ್ಮಾಣ

ಕಿಸಾನ್ ಸಂಪದ ಯೋಜನೆ

ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.

ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ

  • 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ
  • ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು
  • ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ 

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್: ಸೀತಾರಾಮನ್

  • 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
  • ಮತ್ಸ್ಯ ಸಂಪದ ಯೋಜನೆ ಘೋಷಣೆ
  • ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೀನುಗಾರರ ಅಭಿವೃದ್ಧಿಗಾಗಿ ರೂಪಿಸಲಾಗಿರುವ ಮತ್ಸ್ಯಯೋಜನೆಯಿಂದ 55 ಲಕ್ಷ ಹೊಸ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ.

ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ ಮಾಡುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸರ್ವೈಕಲ್ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಲಸಿಕೆ ನೀಡುವ ಯೋಜನೆಯನ್ನೂ ಕೇಂದ್ರ ವಿತ್ತಸಚಿವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಸ್ಕಿಲ್ ಇಂಡಿಯಾ ಮಿಷನ್ ನಿಂದ 1.4 ಕೋಟಿ ಯುವಕರಿಗೆ ತರಬೇತಿ, 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ, ದೇಶಾದ್ಯಂತ 390 ವಿಶ್ವವಿದ್ಯಾಲಯಗಳನ್ನು ಕೇಂದ್ರ ಸರ್ಕಾರ ಆರಂಭಿಸಿದೆ.

ದೇಶದಲ್ಲಿ ಬಡತನವನ್ನು ನಿಭಾಯಿಸುವ ಹಿಂದಿನ ವಿಧಾನವು ಅತ್ಯಂತ ಸಾಧಾರಣ ಫಲಿತಾಂಶಗಳನ್ನು ನೀಡಿತು. ಬಡವರು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಶಕ್ತ ಪಾಲುದಾರರಾದಾಗ, ಅವರಿಗೆ ಸಹಾಯ ಮಾಡುವ ಸರ್ಕಾರದ ಶಕ್ತಿ ಅನೇಕ ಪಟ್ಟು ಹೆಚ್ಚಾಗುತ್ತದೆ. ಕಳೆದ 10 ವರ್ಷಗಳಲ್ಲಿ ಸರ್ಕಾರವು ಬಹು ಆಯಾಮದ ಬಡತನದಿಂದ ನಿರ್ಗತಿಕರನ್ನು ಮುಕ್ತಿಗೊಳಿಸಲು 25 ಕೋಟಿ ಜನರಿಗೆ ನೆರವು ನೀಡಿದೆ.

ಇನ್ನು, ಪಿಎಂ ಸ್ವಾನಿಧಿ ಯೋಜನೆಯಡಿ 78 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಾಲದ ನೆರವು ನೀಡಲಾಗಿದೆ. ಒಟ್ಟು 2.3 ಲಕ್ಷ ಮಂದಿ ಮೂರನೇ ಬಾರಿಗೆ ಸಾಲ ಪಡೆದಿದ್ದಾರೆ. ಪ್ರಧಾನಮಂತ್ರಿ ಜನ್ ಮನ್ ಯೋಜನೆಯು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳನ್ನು ತಲುಪುತ್ತದೆ. ಪ್ರಧಾನಮಂತ್ರಿ ವಿಶಕರ್ಮ ಯೋಜನೆಯು ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳಿಗೆ ಅವರ ಜೀವನದ ಕೊನೆಯವರೆಗೂ ಸಹಾಯ ಮಾಡುತ್ತದೆ. ವಿಶೇಷ ಚೇತನರು ಮತ್ತು ತೃತೀಯಲಿಂಗಿಗಳ ಸಬಲೀಕರಣದ ಯೋಜನೆಯು ಯಾರನ್ನೂ ಸರ್ಕಾರವು ಯಾರನ್ನೂ ಹಿಂದೆ ಬಿಡುವುದಿಲ್ಲ ಎಂಬ ನಮ್ಮ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ.

2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

5 ವರ್ಷಗಳಲ್ಲಿ 3 ಕೋಟಿ ಮನೆ ನಿರ್ಮಾಣ ಗುರಿ, ಜನರು ಹೆಚ್ಚಿನ ಆದಾಯ ಗಳಿಸಲು ಹೆಚ್ಚಿನ ಆದ್ಯತೆ, ವಿಶ್ವದ ಸಮಸ್ಯೆಗಳಿಗೆ ಭಾರತ ಪರಿಹಾರ ನೀಡಿದೆ. ಎನ್ಇಪಿ ಮೂಲಕ ಯುವಕರ ಸಬಲೀಕರಣ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!