spot_img
Wednesday, January 22, 2025
spot_img

ಎಣ್ಣೆ ಪ್ರಿಯರಿಗೆ ಶಾಕ್‌ ನೀಡಿದ ಸರ್ಕಾರ : ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿಗೆ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಸರ್ಕಾರ ಶೇ.185 ರಿಂದ 195 ಕ್ಕೆ ಹೆಚ್ಚಳ ಮಾಡಿದ್ದು, ಬಿಯರ್‌ ಬೆಲೆ ಏರಿಕೆಯಾಗಿದೆ. ಇಂದಿನಿಂದ  ( ಗುರುವಾರ, ಫೆ.1) ಪ್ರತಿ ಬಾಟಲ್ ಗೆ 5 ರಿಂದ 12 ರೂ. ವರೆಗೆ ಏರಿಕೆಯಾಗಿದೆ. ಬ್ರಾಂಡ್‌ಗಳ ಆಧಾರದದಲ್ಲಿ ಬೆಲೆ ಹೆಚ್ಚಳವಾಗಲಿದ್ದು. ಸಾಮಾನ್ಯ ಬ್ರಾಂಡ್‌ ಗಳಿಂದ ಪ್ರೀಮಿಯಂ ಬ್ರಾಂಡ್‌ ಗಳವರೆಗೆ ಎಲ್ಲಾ ಬಗೆಯ ಬಿಯರ್‌ ಗಳ ದರದಲ್ಲಿ ಏರಿಕೆಯಾಗಲಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದು ಎರಡನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳವಾಗಿದೆ. ಚುನಾವಣೆ ಗೆದ್ದ ನಂತರ ಜುಲೈ 7 ರಂದು ಮಂಡಿಸಿದ ಮೊದಲ ಬಜೆಟ್‌ ನಲ್ಲಿ ಮುಖ್ಯ,ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 20 ರಷ್ಟು ಹೆಚ್ಚಳ ಮಾಡಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಇದೇ ಬರುವ ಫೆಬ್ರವರಿ 16 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಇದರ ನಂತರ ಇತರ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಏರಿಸಬಹುದಾದ ಸಾಧ್ಯತೆಗಳಿವೆ ಎಂಬ ಮಾಹಿತಿ ಬಲ್ಲ ಮೂಲಗಳು ತಿಳಿಸಿವೆ.

ಸರ್ಕಾರ ಬಿಯರ್ ಮಾರಾಟದಲ್ಲಿ ದೊಡ್ಡ ಬೆಳವಣಿಗೆಯಾಗಿರುವುದರಿಂದ ಅಬಕಾರಿ ಸುಂಕ ಏರಿಕೆ ಮಾಡಿದೆ ಎಂದು ಹೇಳಲಾಗಿದೆ. ರಾಜ್ಯ ಸರಕಾರದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ ಬರುವ ಆದಾಯವು ನಿರ್ಣಾಯಕವಾಗಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ಅಬಕಾರಿಯಿಂದ ಸುಮಾರು 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!