Sunday, September 8, 2024

ಆನ್ ಲೈನ್ ಮುಖಾಂತರ ವಿವಾಹ ನೋಂದಣಿಗೆ ಅವಕಾಶ : ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ : ಎಚ್‌. ಕೆ ಪಾಟೀಲ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಆನ್ ಲೈನ್ ಮುಖಾಂತರ ವಿವಾಹ ನೋಂದಣಿಗೆ ಅವಕಾಶ ಒದಗಿಸುವ ದೃಷ್ಟಿಯಿಂದ ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಎಚ್​ಕೆ ಪಾಟೀಲ್ ಇಂದು(ಗುರುವಾರ) ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಚ್. ​ಕೆ ಪಾಟೀಲ್​, ವಿವಾಹ ನೋಂದಣಿ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ಸೂಚಿಸಿದ್ದು, ಹಿಂದೂ ವಿವಾಹ ನೊಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮೊದಲು ವಿವಾಹ ನೋಂದಣಿ ಆಗುತ್ತಿದ್ದವು. ಈಗ ಆನ್ ಲೈನ್ ಮುಖಾಂತರ ನೋಂದಣಿಗೆ ಅವಕಾಶವಿದೆ. ಗ್ರಾಮ 1, ಕಾವೇರಿ 2, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ನು ಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಮಾತ್ರವಲ್ಲದೇ ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಒಪ್ಪಿಗೆ ನೀಡಿದೆ. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ಹಾಗೂ ಅಸ್ತಿತ್ವದಲ್ಲಿರುವ 82 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ
ಮಹಾನಗರ ಪಾಲಿಕೆಗಳಲ್ಲಿ 10 ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 24 ಸೇರಿದಂತೆ ಒಟ್ಟು 34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ 36 ಕೋಟಿ ರೂ. ನೀಡಲು ಸಂಪುಟ ಅನುಮೋದನೆ ಸೂಚಿಸಿದೆ. ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದವರು ಮಾಹಿತಿ ನೀಡಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯ ಅಡಿ ಬೆಳಗಾವಿಯ ಹುಚ್ಚಗಾಂವ್, ಬಸ್ತವಾಡಿಯ 20 ಕೆರೆಗಳನ್ನು ತುಂಬಿಸುವ 250 ಕೋಟಿ ರೂ. ವೆಚ್ಚದ ಯೋಜನೆ ಮತ್ತು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ 61 ಕೆರೆ ತುಂಬಿಸುವ 519 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಲಾಗಿದೆ. ಘಟಪ್ರಭಾ ನದಿಯಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!