spot_img
Sunday, March 8, 2026
spot_img

ಫೆಬ್ರವರಿ 3 ರಂದು ಹೊಳಪು ಕ್ರೀಡಾಕೂಟದ ಮಹಾದ್ವಾರ ಉದ್ಘಾಟನೆ

ಕೋಟ : ಫೆಬ್ರವರಿ 10 ರಂದು ಕೋಟದಲ್ಲಿ ನಡೆಯಲಿರುವ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಪಂಚಾಯತ್ ರಾಜ್ & ನಗರ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಉತ್ಸವ ಹೊಳಪು-2024 (ಗ್ರಾಮ ಸರ್ಕಾರದ ದಿಬ್ಬಣ) ಕಾರ್ಯಕ್ರಮದ ಪೂರ್ವಭಾವಿಯಾಗಿ ಡಾ. ಶಿವರಾಮ ಕಾರಂತ ಮಹಾದ್ವಾರವನ್ನು ನಾಳೆ ಫೆಬ್ರವರಿ 3ರಂದು ಮಧ್ಯಾಹ್ನ 3 ಘಂಟೆಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಉದ್ಘಾಟಿಸಲಿದ್ದಾರೆ.

ಅವಳಿ ಜಿಲ್ಲೆಗಳ ಒಟ್ಟು 377 ಗ್ರಾಮ ಪಂಚಾಯತ್ಗಳು ಹಾಗೂ ೧೭ ನಗರ ಸ್ಥಳೀಯಾಡಳಿತ ಸಂಸ್ಥೆಗಳ 6000ಕ್ಕೂ ಮಿಕ್ಕಿ ಜನಪ್ರತಿನಿಧಿಗಳು ಹಾಗೂ ಸಾವಿರಾರು ಅಧಿಕಾರಿ ಸಿಬ್ಬಂದಿಗಳು ಹೊಳಪು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದ ಪೂರ್ವಭಾವಿಯಾಗಿ ಡಾ.ಶಿವರಾಮ ಕಾರಂತ ಮಹಾದ್ವಾರ ಉದ್ಘಾಟನೆಗೊಳ್ಳಲಿದೆ.

ಶನಿವಾರ ಮಧ್ಯಾಹ್ನ 3 ಘಂಟೆಗೆ ಕೋಟದ ರಾಷ್ಟ್ರೀಯ ಹೆದ್ದಾರಿ 66ರ ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ನಡೆಯುವ ಡಾ|| ಶಿವರಾಮ ಕಾರಂತ ಮಹಾದ್ವಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಮಹಾದ್ವಾರ ಉದ್ಘಾಟನೆಯ ನಂತರ ಟಿ-ಶರ್ಟ್ ಬಿಡುಗಡೆ, ಹೊಳಪು ಕಾರ್ಯಕ್ರಮ ರೂಪುರೇ?ಗಳ ಕುರಿತು ಚರ್ಚೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!