spot_img
Sunday, March 8, 2026
spot_img

ದೇಶವನ್ನು ವಿಭಜಿಸುವುದರ ಕುರಿತಾಗಿ ಯಾರೇ ಮಾತನಾಡಿದರೂ ಸಹಿಸುವುದಿಲ್ಲ : ಮಲ್ಲಿಕಾರ್ಜುನ್‌ ಖರ್ಗೆ  | ಕಾಂಗ್ರೆಸ್‌ ಕ್ಷಮೆಯಾಚನೆಗೆ ಜೋಶಿ ಒತ್ತಾಯ

ಜನಪ್ರತಿನಿಧಿ ವಾರ್ತೆ (ನವದೆಹಲಿ)  : ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದಧ್ವನಿ ಎತ್ತಬೇಕಾಗುತ್ತದೆ ಎಂದು ನೀಡಿರುವ  ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲಕ್ಕೆ ಸೃಷ್ಟಿಯಾಯಿತು. ಕಾಂಗ್ರೆಸ್ ಸಂಸದ ಸುರೇಶ್ ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸಿದ್ದಾರೆ.

ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು(ಶುಕ್ರವಾರ) ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸದನದಲ್ಲಿಯೇ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪಕ್ಷದ ಸಂಸದರು ನೀಡಿರುವ ಹೇಳಿಕೆಯನ್ನು ಖಂಡಿತ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ದೇಶವನ್ನು ವಿಭಜಿಸುವುದರ ಕುರಿತಾಗಿ ಯಾರೇ ಮಾತನಾಡಿದರೂ ಸಹಿಸುವುದಿಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಖಡಕ್‌ ಆಗಿ ಹೇಳಿದರು.

ಕ್ಷಮೆಯಾಚನೆಗೆ ಜೋಶಿ ಒತ್ತಾಯ : ಸಂಸದ ಡಿಕೆ ಸುರೇಶ್ ಹೇಳಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಚಿವ ಪ್ರಲ್ಹಾದ್ ಜೋಶಿ, ದೇಶವಿಭಜನೆ ಬಗ್ಗೆ ಮಾತನಾಡಿದ ಪ್ರಹ್ಮಾದ್‌ ಜೋಶಿ, ಸಂಸದ ಡಿ. ಕೆ ಸುರೇಶ್‌  ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್​​ನ ಪ್ರಯತ್ನ ಇನ್ನೂ ಮುಂದುವರೆದಿದೆ. ಈ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಮತ್ತು ಕ್ಷಮೆ ಕೇಳಬೇಕು. ಇದು ಸಂವಿಧಾನಕ್ಕೆ ಮಾಡಿದ ಘೋರ ಅಪಮಾನ. ಅಷ್ಟೆ ಅಲ್ಲದೆ ತನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು, ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ಹೊಸತೇನನ್ನೂ ನೀಡಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವು ಪ್ರತ್ಯೇಕ ರಾಷ್ಟ್ರಕ್ಕೆ ಒತ್ತಾಯ ಮಾಡಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಅವರು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!