Sunday, September 8, 2024

ಸಂಸದ ಡಿ. ಕೆ ಸುರೇಶ್‌ ಅವರ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ | ಭಾರತವನ್ನು ವಿಭಜಿಸಲು ಡಿ. ಕೆ ಸುರೇಶ್ ಷಡ್ಯಂತ್ರ ಹೂಡಿದ್ದಾರೆ : ಬಿಜೆಪಿ ಮುಖಂಡ

ಜನಪ್ರತಿನಿಧಿ ವಾರ್ತೆ (ಬಂಟ್ವಾಳ) : ಪ್ರತ್ಯೇಕ ರಾಷ್ಟ್ರ ಹೇಳಿಕೆ ನೀಡಿ ವಿವಾದಕ್ಕೆ ಈಡಾದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ವಿರುದ್ಧ ದಕ್ಷಿಣ ಕನ್ನಡದ ಬಿಜೆಪಿ ಮುಖಂಡರೊಬ್ಬರು ಇಂದು(ಶುಕ್ರವಾರ) ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದು, ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಮುಖಂಡ ವಿಕಾಸ್ ಪಿ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಾಗೂ ಮಂಗಳೂರು ಉತ್ತರ ಪೊಲೀಸರಿಗೆ ದೂರು ಸಲ್ಲಿಸಿದ್ದು, ಕಾಂಗ್ರೆಸ್ ಸಂಸದರ ಹೇಳಿಕೆಯಿಂದ ತನ್ನ ಭಾವನೆಗಳಿಗೆ ಧಕ್ಕೆಯಾಗಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ದೂರು ದಾಖಲಿಸಿ ವರದಿಗಾರರಿಗೆ ಪ್ರತಿಕ್ರಿಯಿಸಿದ ವಿಕಾಸ್ ಪಿ, ಸಂಸದ ಡಿ.ಕೆ.ಸುರೇಶ್ ದೇಶವಿರೋಧಿ ಹೇಳಿಕೆ ನೀಡಿದ್ದು, ಸಂಸದರಾಗಿದ್ದರೂ ಭಾರತವನ್ನು ವಿಭಜಿಸಲು ಷಡ್ಯಂತ್ರ ಹೂಡಿದ್ದಾರೆ. ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸಂಸದನ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಕೋರ್ಟ್ ಗೆ ಮನವಿ ಮಾಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಡಿ.ಕೆ.ಸುರೇಶ್ ಅವರು ದೇಶವನ್ನು ವಿಭಜಿಸಲು ಪ್ರತ್ಯೇಕತಾವಾದಿ ಶಕ್ತಿಗಳನ್ನು ಪ್ರಚೋದಿಸುವ ಮೂಲಕ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 7 ರಂದು ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಿದ ನಂತರ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರು, ಕೇಂದ್ರ ಸರ್ಕಾರ, ನಮ್ಮ ತೆರಿಗೆ ಹಣವನ್ನು ಉತ್ತರ ಭಾರತದ ರಾಜ್ಯಗಳಿಗೆ ಹಂಚುತ್ತಿದೆ. ಹೆಚ್ಚಿನ ತೆರಿಗೆ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ಹೀಗೆ ಮುಂದುವರೆದರೆ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!