spot_img
Wednesday, April 22, 2026
spot_img

ಬಿಬಿಎಂಪಿ ಅಕ್ರಮ : ಅಕ್ರಮವನ್ನು ಬಯಲಿಗೆಳೆಯಲು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಿ : ಅಶೋಕ್‌ ಒತ್ತಾಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಬೃಹತ್‌ ಬೆಂಗಳೂರು ಮಹಯಾನಗರ ಪಾಲಿಕೆ ವತಿಯಿಂದ ತೆರಿಗೆ ಸಂಗ್ರಹದಲ್ಲು ಬ್ರಹ್ಮಾಡ ಭ್ರಷ್ಟಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಲಯ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಬಿಬಿಎಂಪಿ ಕಂದಾಯ ವಿಭಾಗಕ್ಕೆ ವಿಶೇಷ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಶಿಫಾರಸ್ಸು ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರಾಜ್ಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನು, ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ. ಕೆ ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕು ಎಂದು ಕೂಡ ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!