spot_img
Saturday, March 7, 2026
spot_img

ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ : ಸಿಎಂ  

ಜನಪ್ರತಿನಿಧಿ ವಾರ್ತೆ (ದಾವಣಗೆರೆ)  : ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಶನಿವಾರ) ಹೇಳಿದ್ದಾರೆ.

ಇಲ್ಲಿ ವರದಿಗಾರರು, ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್‌. ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ʼಭಾರತ ರತ್ನʼ ಘೋಷಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಾರತ ರತ್ನ ಕೊಡಲಿ. ಡಾ. ಶಿವಕುಮಾರ ಸ್ವಾಮೀಜಿಯವರಿಗೆ ನಾವು ಮರಣೋತ್ತರ ಭಾರತ ರತ್ನ ನೀಡಲು ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಅವರು ಹೇಳಿದರು.

ಇನ್ನು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಬೆಳಗಾವಿ ಲೋಕಸಭೆ ಟಿಕೆಟ್ ನೀಡುವುಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರೂ ಓರ್ವ ಆಕಾಂಕ್ಷಿ. ಯಾರಾದರೂ ಟಿಕೆಟ್ ಕೇಳಬಹುದು. ಯಾರಿಗೂ ಕೇಳಬೇಡಿ ಎಂದು ಹೇಳಲಾಗುವುದಿಲ್ಲ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು. ಅಂತಿಮವಾಗಿ ಸ್ಥಳೀಯ ಮುಖಂಡರು, ಕ್ಷೇತ್ರದ ಶಾಸಕರು, ಸಂಸದರು, ಎಲ್ಲ ಸೇರಿ ಚರ್ಚಿಸಿ ತೀರ್ಮಾನ  ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!