spot_img
Saturday, March 7, 2026
spot_img

ಬಿಜೆಪಿ ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಒಗ್ಗೂಡಬೇಕು : ನ್ಯಾಯ್‌ ಯಾತ್ರೆಯಲ್ಲಿ ಜೈರಾಮ್‌ ರಮೇಶ್‌

ಜನಪ್ರತಿನಿಧಿ ವಾರ್ತೆ(ಜಾರ್ಖಂಡ್‌) :  ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಬೇಕಿದೆ. ಎಲ್ಲಾ ಪಕ್ಷಗಳು ಒಗ್ಗೂಡಬೇಕಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೈರಾಮ್‌ ರಮೇಶ್‌ ಇಂದು (ಶನಿವಾರ) ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ʼಭಾರತ್‌ ಜೋಡೋ ನ್ಯಾಯ್‌ ಯಾತ್ರೆʼಯಲ್ಲಿ ಪಾಲ್ಗೊಂಡಿದ್ದ ಜೈರಾಮ್‌ ರಮೇಶ್‌, ವರದಿಗಾರರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಕ್ಷೇತ್ರಗಳನ್ನು ಪಡೆಯುತ್ತದೆಯೇ ಎಂಬ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಇನ್ನೂ ʼಇಂಡಿಯಾʼ ಮೈತ್ರಿಕೂಟದ ಭಾಗವಾಗಿಯೇ ಇದ್ದಾರೆ ಎಂದು ನಾವು ನಂಬಿದ್ದೇವೆ. ಲೋಕಸಭಾ ಚುನಾವಣೆಯನ್ನು ಎಲ್ಲಾ ಪಕ್ಷಗಳು ಒಗ್ಗೂಡಿ ಎದುರಿಸಬೇಕದೆ ಎಂದು ಅವರು ಹೇಳಿದ್ದಾರೆ.

ಪಾಟ್ನಾ, ಬೆಂಗಳೂರು ಹಾಗೂ ಮುಂಬೈನಲ್ಲಿ ನಡೆದ ಸಭೆಯಲ್ಲಿ ನಾವೆಲ್ಲರೂ ಒಗ್ಗಟಟಿನಿಂದಲೇ ಇದ್ದೇವು. ಮೀ ನಡುವೆ ಏನೋ ಸಣ್ಣ ಭಿನ್ನಾಭಿಪ್ರಾಯ ಉಂಟಾಗಿರಬಹುದು ಎಂಬ ಭಾವನೆ ಮೂಡುತ್ತಿದೆ. ಶಿವಸೇನೆ, ನಿತೀಶ್‌ ಕುಮಾರ್‌ ವಿಪಕ್ಷಗಳ ಮೈತ್ರಿಕೂಟದಿಂದ ದೂರಾದರು. ಇದೀಗ ಮಮತಾ ಅವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆ ಸ್ಥಳೀಯ ಚುನಾವಣೆಯಂತಲ್ಲ ಎನ್ನುವುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!