spot_img
Saturday, March 7, 2026
spot_img

ವಿಶಾಲ ಗಾಣಿಗ ಕೊಲೆ ಪ್ರಕರಣ : ಲಕ್ನೋದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು !

ಜನಪ್ರತಿನಿಧಿ ವಾರ್ತೆ (ಉಡುಪಿ) : ಸರಿಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿ ಕೊನೆಗೂ ಬಂಧನಕ್ಕೊಳಗಾಗಿದ್ದಾನೆ.

ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು, ಇಂದು(ಶನಿವಾರ) ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ 2021ನೇ ಜುಲೈ ತಿಂಗಳಿನಲ್ಲಿ ವಿಶಾಲ ಗಾಣಿಗ ಅವರ ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.

ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಮೂರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿತ್ತು.

ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!