Sunday, September 8, 2024

ಸೀಸ ಕದ್ದಿರುವ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸುವಂತೆ ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಒತ್ತಾಯ

ಕುಂದಾಪುರ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ಅಂಗಡಿಯೊಂದರಿಂದ ಸೀಸ ಕದ್ದಿರುವ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸುವಂತೆ ಗಂಗೊಳ್ಳಿಯ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಬೈಂದೂರು ಪೊಲೀಸ್ ವೃತ್ತ ನಿರೀಕ್ಷರಲ್ಲಿ ಮನವಿ ಮಾಡಿದೆ.

ಗಂಗೊಳ್ಳಿಯ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಪದಾಧಿಕಾರಿಗಳು ಹಾಗೂ ಮೀನುಗಾರರು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿ ಆಗ್ರಹಿಸಿದೆ.

ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿನ ಅಂಗಡಿಯಿಂದ ಲಕ್ಷಾಂತರ ರೂ. ಮೌಲ್ಯದ ಸೀಸ ಕಳವು ಮಾಡಿರುವ ಆರೋಪಿಯು ಈ ಹಿಂದೆ ಹಲವಾರು ವರ್ಷಗಳಿಂದ ದೋಣಿ ಹಾಗೂ ಬೋಟುಗಳಲ್ಲಿರುವ ರಿಂಗ್, ಪೀಸ್, ಜಿಪಿ‌ಎಸ್ ಮತ್ತು ಇನ್ನಿತರ ಬೆಲೆ ಬಾಳುವ ಸ್ವತ್ತುಗಳನ್ನು ಕಳವು ಮಾಡಿರುವ ಮತ್ತು ಕದ್ದ ಸ್ವತ್ತುಗಳನ್ನು ಗುಜರಿ ಅಂಗಡಿಗಳಿಗೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಯನ್ನು ಸಮಗ್ರ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿರುವ ಮೀನುಗಾರ ಮುಖಂಡರು, ಈ ಹಿಂದೆ ಕಳವು ಮಾಡಿರುವ ಅನೇಕ ಪ್ರಕರಣಗಳ ಬಗ್ಗೆ ಆರೋಪಿಗಳಿಂದ ಮಾಹಿತಿ ಪಡೆದು, ಕಳವು ಪ್ರಕರಣವನ್ನು ಬೇಧಿಸಬೇಕಾಗಿ ಮತ್ತು ಕಳವು ಮಾಡಿರುವ ಸ್ವತ್ತುಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಬೇಕೆಂದು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಗಂಗೊಳ್ಳಿ, ಗೌರವಾಧ್ಯಕ್ಷ ಗಣಪತಿ ಖಾರ್ವಿ, ಮೀನುಗಾರ ಮುಖಂಡ ರಮೇಶ ಕುಂದರ್, ಗಂಗೊಳ್ಳಿಯ ವಿವಿಧ ಮೀನುಗಾರ ಸಂಘಟನೆಯ ಪ್ರಮುಖರು, ಮೀನುಗಾರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!