spot_img
Friday, March 6, 2026
spot_img

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡರಿಗೆ ಅಭಿನಂದನೆ

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು, ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ತುಮಕೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಇವರನ್ನು ಸನ್ಮಾನಿಲಾಯಿತು.

ಸಂಸ್ಥೆಯ ಅಧ್ಯಕ್ಷರೂ ಹಾಗೂ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಸಾಧಕ ಶಿಕ್ಷಕರನ್ನು ಸನ್ಮಾನಿಸಿ, ಶುಭಹಾರೈಸಿದರು.

ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾರಾಜೇಶ್, ಆರ್. ಎನ್. ಶೆಟ್ಟಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ನವೀನ್‌ಕುಮಾರ್ ಶೆಟ್ಟಿ, ಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಸ್ವಪ್ನ ಸತೀಶ್ ಮತ್ತು ದಿವ್ಯಾ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!