spot_img
Thursday, March 5, 2026
spot_img

ಪರೀಕ್ಷೆ ಎನ್ನುವುದು ಜವಾಬ್ದಾರಿ -ನರೇಂದ್ರ ಎಸ್ ಗಂಗೊಳ್ಳಿ

 KUNDAPURA: ಪರೀಕ್ಷೆ ಎಂದರೆ ಹೋರಾಡಲು ಯುದ್ಧವು ಅಲ್ಲ. ಸಂಭ್ರಮಿಸಲು  ಹಬ್ಬವೂ ಅಲ್ಲ. ಅದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ ಆಗಿದೆ. ಹಾಗಾಗಿ ಅದನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಹೇಳಿದರು.

 ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆಶ್ರಯದಲ್ಲಿ  ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷಾ ಸಿದ್ಧತಾ ಮಾರ್ಗದರ್ಶಿ ಕಾರ್ಯಕ್ರಮ ‘ಪಯಣ’  ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾರ್ಗದರ್ಶನ ನೀಡುತ್ತಾ ಮಾತನಾಡಿದರು.

 ಎಷ್ಟನ್ನು ಓದಿಕೊಂಡಿರುವಿರಿ ಎನ್ನುವುದಕ್ಕಿಂತ ಏನನ್ನು ಓದಿರುವಿರಿ ಮತ್ತು ಎಷ್ಟು ಅರ್ಥ ಮಾಡಿಕೊಂಡಿರುವಿರಿ ಎನ್ನುವುದು ಮುಖ್ಯ. ಎಲ್ಲಾ ವಿಷಯಗಳಿಗೂ ಸಮಾನ ಆದ್ಯತೆ ನೀಡುವುದನ್ನು ಮರೆಯಬಾರದು ಎಂದು ಅವರು ಹೇಳಿದರು.

 ಶಿವಮೊಗ್ಗದ ಹಿರಿಯ ನಾಗರಿಕರ ಸಹಾಯವಾಣಿಯ ಕಾನೂನು ಸಲಹೆಗಾರರಾದ ಅನಂತ ಗಂಗೊಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ.ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

 ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಶುಭ ಹಾರೈಸಿದರು.

 ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಜಿ. ಕೆ.ವೆಂಕಟೇಶ್ ಕೊಡೇರಿಮನೆ ಸ್ವಾಗತಿಸಿದರು. ಸನ್ನಿಧಿ ಹೊಳ್ಳ ಮತ್ತು ದೀಕ್ಷಾ ಪೂಜಾರಿ ಪ್ರಾರ್ಥಿಸಿದರು ಹರ್ಷಿತಾ ಎಸ್ ಪೂಜಾರಿ  ಕಾರ್ಯಕ್ರಮವನ್ನು ನಿರೂಪಿಸಿದರು.  ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಜಿ.ಎ.ಆರ್ ಲಕ್ಷ್ಮಣ  ಧನ್ಯವಾದ ಅರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!