Sunday, September 8, 2024

ನ್ಯಾಯ್‌ ಯಾತ್ರೆಯ ನಡುವೆ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ಅವರನ್ನು ಭೇಟಿ ಮಾಡಿದ ರಾಹುಲ್‌ ಗಾಂಧಿ !

ಜನಪ್ರತಿನಿಧಿ ವಾರ್ತೆ (ರಾಂಚಿ ) : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯ ನಡುವೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ಅವರನ್ನು ಇಂದು (ಸೋಮವಾರ) ಭೇಟಿಯಾಗಿದ್ದಾರೆ.

ಜಾರ್ಖಂಡ್‌ನಲ್ಲಿ ರಚನೆಯಾಗಿರುವ ಜೆಎಂಎಂ, ಕಾಂಗ್ರೆಸ್‌, ಆರ್‌ಜೆಡಿ ಹಾಗೂ ಸಿಪಿಐ(ಎಂಎಎಲ್‌) ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಿದ ಕೆಲವೇ ನಿಮಿಷಗಳ ಬಳಿಕ ಹಾಗೂ ಇಲ್ಲಿನ ಐತಿಹಾಸಿಕ ಶಾಹೀದ್‌ ಮೈದಾನದಲ್ಲಿ ಸಾರ್ವಜನಿಕ ರ್ಯಾಲಿ ಪ್ರಾರಂಭವಾಗುವುದಕ್ಕೂ ಮೊದಲೇ, ರಾಹುಲ್ ಕಲ್ಪನಾ ಸೋರೇನ್‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ತಮ್ಮ ಅಧಿಕೃತ ಮೈಕ್ರೋ ಬ್ಲಾಗಿಂಗ್‌ ʼಎಕ್ಸ್‌ʼ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.

ಭೂ ಹಗರಣದಲ್ಲಿ ನಡೆದಿದೆ ಎಂದು ಹೇಳಲಾಗಿರುವ ಕಾನೂನು ಬಾಹೀರ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸೊರೇನ್‌ ಅವರನ್ನು ಕಳೆದವಾರ ಬಂಧಿಸಲಾಗಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!