spot_img
Wednesday, March 4, 2026
spot_img

ಈ ರಾಜ್ಯ ನನಗೆ ಇಷ್ಟವಿಲ್ಲದ ಕಾರಣ ನೀಡಬೇಕಾದ ಹಣವನ್ನು ತಡೆ ಹಿಡಿಯಿರಿ ಎಂದು ವಿತ್ತ ಸಚಿವರು ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ನಿರ್ಮಲಾ ಸೀತಾರಾಮನ್‌  

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ಬಿಜೆಪಿಯೇತರ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಬೇಕಾದ ಹಣ ನೀಡುವುದರಲ್ಲಿ ವಿಳಂಬ ಮಾಡುತ್ತಿದೆ ಎಂಬ ಆರೋಪಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಸೋಮವಾರ) ಸಂಸತ್‌ ಅಧಿವೇಶನದಲ್ಲಿ ತಿರುಗೇಟು ನೀಡಿದ್ದಾರೆ.

ಕರ್ನಾಟಕಕೇ ನೀಡಬೇಕಾದ ಹಣವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ರಾಜ್ಯ ಸರ್ಕಾರದ ಹೇಳಿಕೆಯನ್ನು ಸಂಸತ್‌ ಚರ್ಚೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಎಲ್ಲೇಖಿಸಿ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ತಿರುಗೇಟು ನೀಡಿದ್ದ ವಿತ್ತ ಸಚಿವರು, ಇದೊಂದು ರಾಜಕೀಯ ವಿರೋಧಿ ಹೇಳಿಕೆ ಹಾಗೂ ಪಟ್ಟ ಭದ್ರ ಹಿತಾಸಕ್ತಿಗಳು ಈ ರೀತಿ ಹೇಳಿಕೆ ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರವೇ ಕೇಂದ್ರ ಸರ್ಕಾರವು ಕಾರ್ಯ ನಿರ್ವಹಿಸುತ್ತಿದೆ. ಆಡಳಿತ ವ್ಯವಸ್ಥೆ ಉತ್ತಮವಾಗಿದೆ ಎಂದು ಅವರು ಹೇಳಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ಈ ರಾಜ್ಯ ನನಗೆ ಇಷ್ಟವಿಲ್ಲದ ಕಾರಣ ಈ ರಾಜ್ಯಕ್ಕೆ ನೀಡಬೇಕಾದ ಹಣವನ್ನು ತಡೆ ಹಿಡಿಯಿರಿ ಎಂದು ವಿತ್ತ ಸಚಿವರು ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಅವರು ಕಟುವಾಗಿ ಹೇಳಿದ್ದಾರೆ.

ಫೆಬ್ರವರಿ ೭ ರಂದು ನವದೆಹಲಿಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಸರಿಯಾಗಿ ಹಣ ಮಂಜೂರು ಮಾಡದ ಹಿನ್ನೆಲೆ ಶಾಸಕರು, ಎಂಎಲ್‌ಸಿಗಳು ಹಾಗೂ ಸಂಸದರು ಸೇರದಂತೆ ರಾಜ್ಯ ಕಾಂಗ್ರೆಸ್‌ ಘಟಕವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ಕರ್ನಾಟಕ ದೇಶದಲ್ಲಿಯೇ ಎರಡನೇಯ ಅತಿ ಹೆಚ್ಚು ತೆರಿಗೆ ಕಟ್ಟುತ್ತಿರುವ ರಾಜ್ಯವಾಗಿದೆ, ಆದರೂ ಹಣ ಮಂಜೂರು ಮಾಡುವಲ್ಲಿ ನಮ್ಮ ರಾಜ್ಯಕ್ಕೆ ಎಂದಿಗೂ ಅನ್ಯಾಯ ಮಾಡಲಾಗುತ್ತಿದೆ ಎನ್ನುವುದು ದುಃಖದ ಸಂಗತಿ. ಕಳೆದ ಐದು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷ್ಯ ಧೋರಣೆಯಿಂದ ನೋಡುತ್ತಿರುವುದು ದುಃಖದ ಸಂಗತಿ ಎಂದು ಡಿ.ಕೆ ಶಿವಕುಮಾರ್‌ ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!