spot_img
Wednesday, March 4, 2026
spot_img

ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಧರಣಿ : ತಾವು ಕೂಡ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಿ ಎಂದು ವಿತ್ತ ಸಚಿವರಿಗೆ ಸಿಎಂ ಬಹಿರಂಗ ಪತ್ರ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡರು, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ್ ಜೋಷಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಸದಾನಂದ ಗೌಡ ಅವರು ಸೇರಿದಂತೆ ದೆಹಲಿಯಲ್ಲಿ ನಾಡನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದು, ಪತ್ರವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದೂ ಹೇಳಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮನಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಹಾಗೂದ ಏಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲಾ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ದೆಹಲಿಯ ಜಂತರ್‌ ಮಂತರ್‌ ನಲ್ಲಿ ಫೆ. ೦೭ರಂದು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರಿ ಅನ್ಯಾಯ, ಬರ ಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಹಾಗೂ ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳನ್ನು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಭಾದಿಸುತ್ತಿವೆ ಎಂದಿದ್ದಾರೆ.

ಮಾತ್ರವಲ್ಲದೇ, ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಅವರು ಪರೋಕ್ಷವಾಗಿ ವಿತ್ತ ಸಚಿವರನ್ನು ಕಟುಕಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!