spot_img
Wednesday, March 4, 2026
spot_img

ಮಧ್ಯ ಪ್ರದೇಶ : ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಪ್ರಕರಣ : ಮೃತರ ಸಂಖ್ಯೆ 11ಕ್ಕೆ ಏರಿಕೆ !

ಜನಪ್ರತಿನಿಧಿ ವಾರ್ತೆ (ಮಧ್ಯ ಪ್ರದೇಶ) : ಇಲ್ಲಿನ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಇಂದು(ಮಂಗಳವಾರ)ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂdu ಈಗ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಹರ್ದಾ ಕಲೆಕ್ಟರ್ ರಿಷಿ ಗಾರ್ಗ್ ಮಾಹಿತಿ ನೀಡಿದ್ದು, ಸ್ಪೋಟ ಪ್ರಕರಣದಲ್ಲಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಭೋಪಾಲ್ ಹಾಗೂ ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ  ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಲು ಕಾರಣ ಏನು ಎಂಬುದು ಈವರೆಗೆ ಮಾಹಿತಿ ತಿಳಿದು ಬಂದಿಲ್ಲ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾರ್ಖಾನೆ ಒಳಗೆ ಹಾಗೂ ಹೊರಗೆ ವ್ಯಾಪಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಕೂಡ ವರದಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು, ತಮ್ಮ ಅಧಿಕೃತ ಮೈಕ್ರೊ ಬ್ಲಾಗಿಂಗ್‌ ʼಎಕ್ಸ್‌ʼ ನಲ್ಲಿ “ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡಲಿದೆ.” ಎಂದು ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!