spot_img
Wednesday, January 22, 2025
spot_img

ರಾಜ್ಯ ಸರ್ಕಾರ ಸ್ವಾರ್ಥ ರಾಜಕಾರಣಕ್ಕಾಗಿ ನಂದಿನಿ ಬ್ರ್ಯಾಂಡ್ ದುರ್ಬಳಕೆ ಮಾಡಿಕೊಂಡಿದೆ : ಬಿಜೆಪಿ ಆರೋಪ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್‌ ನಂದಿನಿ ಬ್ರ್ಯಾಂಡ್ ದುರ್ಬಳಕೆ ಮಾಡಿಕೊಂಡಿದೆ. ಇದರ ನೇರ ಪರಿಣಾಮವನ್ನು ಕರ್ನಾಟಕದ ಹೈನುಗಾರರು ಅನುಭವಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಗಂಭಿರ ಆರೋಪ ಮಾಡಿದೆ.

ಈ ಬಗ್ಗೆ ತನ್ನ ಅಧಿಕೃತ ಮೈಕ್ರೋ ಬ್ಲಾಗಿಂಗ್‌ ʼಎಕ್ಸ್‌ʼ ಖಾತೆಯ ಮೂಲಕ ಕಾಂಗ್ರೆಸ್‌ ವಿರುದ್ಧ ಟೀಕೆ ಮಾಡಿದ ಬಿಜೆಪಿ, ನಂದಿನಿ ಹಾಲಿಗೆ ಇದ್ದ ಹೊರರಾಜ್ಯಗಳ ಮಾರುಕಟ್ಟೆ ಅವಕಾಶಗಳು ಕೈ ರಾಜಕಾರಣದ ಫಲವಾಗಿ ಸಂಪೂರ್ಣ ಬಂದ್‌ ಆಗಿವೆ. ಬೆಂಬಲ ಬೆಲೆ ಕೊಡುತ್ತೇವೆ ಎಂದ ಕಾಂಗ್ರೆಸ್‌ ವಾಸ್ತವದಲ್ಲಿ ಹೆಚ್ಚಳ ಮಾಡಿದ್ದಲ್ಲ, ಇದ್ದದ್ದನ್ನೂ ಕಸಿದುಕೊಂಡಿದೆ ಎಂದು ಆರೋಪಿಸಿದೆ. ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿ, ಪೀಕುತ್ತಿರುವ ಹೆಚ್ಚುವರಿ ಮೊತ್ತವನ್ನೂ ರೈತರಿಗೆ ಕೊಡದೆ ತಾನೇ ತಿನ್ನುತ್ತಿದೆ ಎಂದು ಆರೋಪ ಮಾಡಿದೆ

ರಾಜ್ಯ ಸರ್ಕಾರದ ವಿರುದ್ಧ ತರಾಟೆಗೆ ತೆಗೆದುಕೊಂಡ ಬಿಜೆಪಿ, ಚುನಾವಣೆಗೂ ಮುನ್ನ 7 ರೂ ಸಹಾಯಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದರು. ಆದರೆ ಅದನ್ನು ಇವಾಗ ನೀಡದೆ ಹೈನುಗಾರಿಕೆಗೆ ತಿಲಾಂಜಲಿ ಇಟ್ಟಿದ್ದಾರೆ. ಈ ಮೂಲಕ ವಚನ ಭ್ರಷ್ಟವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದೆ.

ಹೈನುಗಾರರ ಸಮಸ್ಯೆಯ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಗೌರವಯುತವಾಗಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದರು.

ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯಿಂದ ಜನರು ಮಾತ್ರವಲ್ಲ; ಜಾನುವಾರುಗಳೂ ಈ ಸರಕಾರಕ್ಕೆ ಶಾಪ ಹಾಕುತ್ತಿವೆ. ರಾಜ್ಯದ ರೈತರು, ಬಡವರ ಕೋಪವಷ್ಟೇ ಅಲ್ಲ, ಜಾನುವಾರುಗಳ ಕೋಪಕ್ಕೂ ಕೂಡ ರಾಜ್ಯ ಸರ್ಕಾರ ಸಿಲುಕಿದೆ ಎಂದವರು ಆಕ್ರೋಶ ಹೊರ ಹಾಕಿದ್ದರು.

ಬಿ. ಎಸ್.‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡುತ್ತಿದ್ದರು. ಅದರ ಪರಿಣಾಮವಾಗಿ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿದಿನ 80-85 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿತ್ತು. ಇಂದಿನ ಕಾಂಗ್ರೆಸ್ ಸರಕಾರವು ಹಾಲು ಉತ್ಪಾದಕ ರೈತರಿಗೆ 716 ಕೋಟಿ ಬಾಕಿ ಪ್ರೋತ್ಸಾಹಧನವನ್ನು ಉಳಿಸಿಕೊಂಡಿದೆ ಎಂದು ಟೀಕಿಸಿದರು. ಇದರ ಪರಿಣಾಮವಾಗಿ 10 ಲಕ್ಷ ಲೀಟರ್‍ನಷ್ಟು ಹಾಲು ಸಂಗ್ರಹಣೆ ಕಡಿಮೆ ಆಗಿದೆ ಎಂದೂ ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!