spot_img
Wednesday, January 22, 2025
spot_img

ದುಷ್ಟರ ಕಣ್ಣುಗಳಿಂದ ರಕ್ಷಿಸಲು ಕಾಂಗ್ರೆಸ್​ ಹೊರಡಿಸಿರುವ ಕಪ್ಪು ಪತ್ರ ನಮಗೆ ದೃಷ್ಟಿಬೊಟ್ಟಿದ್ದಂತೆ : ಪ್ರಧಾನಿ ವ್ಯಂಗ್ಯ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಹತ್ತು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆಗೆ ಕಾಂಗ್ರೆಸ್​ ಪಕ್ಷವು ಬಿಡುಗಡೆ ಮಾಡಿರುವ ಕಪ್ಪು ಪತ್ರ ದೃಷ್ಟಿ ಬೊಟ್ಟಿದ್ದಂತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು(ಗುರುವಾರ) ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ, ದುಷ್ಟ ಕಣ್ಣುಗಳಿಂದ ರಕ್ಷಿಸಲು ಮನೆಯಲ್ಲಿ ಮಕ್ಕಳಿಗೆ ಹೇಗೆ ಕಪ್ಪು ಹಚ್ಚುತ್ತೇವೋ ಹಾಗೆಯೇ ಸರ್ಕಾರ ಅನೇಕ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದು, ದುಷ್ಟರ ಕಣ್ಣುಗಳಿಂದ ರಕ್ಷಿಸಲು ಕಾಂಗ್ರೆಸ್​ ಹೊರಡಿಸಿರುವ ಕಪ್ಪು ಪತ್ರವೂ ನಮಗೆ ದೃಷ್ಟಿಬೊಟ್ಟಿದ್ದಂತೆ ಎಂದು ವ್ಯಂಗ್ಯವಾಗಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ನಿರುದ್ಯೋಗ, ಬೆಲೆ ಏರಿಕೆ ಹಾಗೂ ರೈತರ ಸಂಕಷ್ಟದಂತಹ ಸಮಸ್ಯೆಗಳ ಗುರಿಯಾಗಿಸಿಕೊಂಡು ಮೋದಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಕಾಂಗ್ರೆಸ್ ಇಂದು ಕಪ್ಪು ಪತ್ರವನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 2014 ರ ಹಿಂದಿನ ಆರ್ಥಿಕತೆಯ ದುರುಪಯೋಗದ ಬಗ್ಗೆ ಸಂಸತ್ತಿನಲ್ಲಿ ಶ್ವೇತಪತ್ರವನ್ನು ಮಂಡಿಸುವ ಮೊದಲು ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಖರ್ಗೆ ಅವರು, ಬೆಲೆ ಏರಿಕೆಯ ಬಗ್ಗೆ ಕೇಳಿದಾಗ ಜವಾಹರಲಾಲ್ ನೆಹರು, ಇಂದಿರಾ ಗಾಂಧಿಯವರ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ. ಕಾಂಗ್ರೆಸ್ ಭಾರತದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದೆ ಮತ್ತು 2024 ರಲ್ಲಿ ದೇಶವನ್ನು ಬಿಜೆಪಿಯ ಅನ್ಯಾಯದ ಕತ್ತಲೆಯಿಂದ ಹೊರತರಲಿದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!