spot_img
Friday, April 25, 2025
spot_img

2000ರಲ್ಲಿ  ಒಬಿಸಿ ಪಟ್ಟಿಗೆ ಸೇರಿಸಲ್ಪಟ್ಟ ತೇಲಿ ಜಾತಿಯ ಕುಟುಂಬದಲ್ಲಿ ಮೋದಿ ಜನಿಸಿದವರು : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಜನಪ್ರತಿನಿಧಿ ವಾರ್ತೆ (ಒಡಿಶಾ) :  ಪ್ರಧಾನಿ ನರೇಂದ್ರ ಮೋದಿ ತಾವು ಒಬಿಸಿ ಎಂದು ಬಿಂಬಿಸಿಕೊಳ್ಲೂವುದರ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು(ಗುರುವಾರ) ಗಂಭೀರ ಆರೋಪ ಮಾಡಿದ್ದಾರೆ.

ಒಡಿಶಾದ ಜಾರಸುಗುಡದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೂರನೇ ಮತ್ತು ಮುಕ್ತಾಯದ ದಿನದಂದು ಸಂಕ್ಷಿಪ್ತ ಭಾಷಣದ ವೇಳೆ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿ ಅವರು ಮೇಲ್ಜಾತಿಗೆ ಸೇರಿದ ಕುಟುಂಬದಲ್ಲಿ ಜನಿಸಿದರು. ಆದರೆ ಮೋದಿ, ತಾವು ಒಬಿಸಿ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 2000ರಲ್ಲಿ  ಒಬಿಸಿ ಪಟ್ಟಿಗೆ ಸೇರಿಸಲ್ಪಟ್ಟ ತೇಲಿ ಜಾತಿಯ ಕುಟುಂಬದಲ್ಲಿ ಮೋದಿ ಜನಿಸಿದವರು. ಆದ್ದರಿಂದ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಇನ್ನು, ಪ್ರಧಾನಿ ಮೋದಿ ಒಬಿಸಿ ಜನಾಂಗದವರೊಂದಿಗೆ ಕೈಕುಲುಕುವುದಿಲ್ಲ. ಆದರೆ ಕೋಟ್ಯಾಧಿಪತಿಗಳನ್ನು ಅಪ್ಪಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಬಿಳಿ ಟೀ ಶರ್ಟ್ ಧರಿಸಿದ್ದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಇಂದು ಇಲ್ಲಿನ ಹಳೆ ಬಸ್ ನಿಲ್ದಾಣದಿಂದ ಯಾತ್ರೆಯನ್ನು ಪುನರಾರಂಭಿಸಿದರು. ಅವರ ಜೊತೆ ಎಐಸಿಸಿ ನಾಯಕ ಅಜೋಯ್ ಕುಮಾರ್ ಮತ್ತು ಒಪಿಸಿಸಿ ಅಧ್ಯಕ್ಷ ಶರತ್ ಪಟ್ಟನಾಯಕ್ ಇದ್ದರು. ಯಾತ್ರೆಯು ಇಂದು ಮಧ್ಯಾಹ್ನ ಒಡಿಶಾದಿಂದ ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!