Sunday, September 8, 2024

ಪರಶುರಾಮ ಥೀಂ ಪಾರ್ಕ್‌ ಅವ್ಯವಹಾರ  : ಸಿಐಡಿ ತನಿಖೆಗೆ ಸಿಎಂ ಆದೇಶ !

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ  ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಗೆಗೆ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ  ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಸೂಚಿಸಿದ್ದು, ಆದರೇ, ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಹೊರಬಂದಿಲ್ಲ ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.  ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಒಪ್ಪಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ  ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.

ಜನಪ್ರತಿನಿಧಿ ಪತ್ರಿಕೆ ಅಕ್ಟೋಬರ್‌ 26, 2023ರಂದು ಪರಶುರಾಮ ಥೀಂ ಪಾರ್ಕ್‌ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖಾ ವರದಿಯನ್ನು ಪ್ರಕಟಿಸಿತ್ತು. ಹಾಗೂ ಇಂದಿನ(08.02.2024, ಗುರುವಾರ) ಸಂಚಿಕೆಯಲ್ಲಿ ಫಾಲೋಅಪ್‌ ವರದಿಯನ್ನು ಪ್ರಕಟಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!