Sunday, September 8, 2024

ಬ್ರಹ್ಮಾವರದಲ್ಲಿ ಜನತಾ ದರ್ಶನ, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ

ಬ್ರಹ್ಮಾವರ : ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಬ್ರಹ್ಮಾವರ ತಾಲ್ಲೂಕು ಆಡಳಿತ, ತಾ.ಪಂ. ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಬ್ರಹ್ಮಾವರದ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.

ಶಾಸಕ ಯಶಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿದಲ್ಲಿ ಮಾತ್ರ ಜನತಾ ದರ್ಶನ ಸಾರ್ಥಕತೆ ಕಾಣುತ್ತದೆ. ಗ್ರಾಮ ಮಟ್ಟದಲ್ಲಿ ಇಂತಹ ಕಾರ್ಯಕ್ರಮಗಳನ್ನು ಮಾಡಿದಲ್ಲಿ ಮಾತ್ರ ಹೆಚ್ಚಿನ ಜನರಿಗೆ ಉಪಯೋಗವಾಗುತ್ತದೆ. ಕಂದಾಯ, ಮೆಸ್ಕಾಂ, ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ಹೆಚ್ಚಿನ ಗಮನ ನೀಡಬೇಕು. ಅಲ್ಲದೇ ಗ್ರಾಮೀಣ ಭಾಗದ ಅದ? ಕಡೆಗೆ ಸರ್ಕಾರಿ ಬಸ್ಸು ಸೇವೆಗಳನ್ನು ಆರಂಭಿಸುವತ್ತ ಚಿಂತನೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಈಗಾಗಲೇ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗಿದ್ದು, ೪೦೦ ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಗಿದೆ. ಉಳಿದ ಸಮಸ್ಯೆಗಳನ್ನು ೧೫ ದಿನದಲ್ಲಿ ಪರಿಹರಿಸಲಾಗುವುದು ಎಂದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನಿತ್ಯಾನಂದ ಬಿ.ಆರ್, ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಂಪುರ, ಪ್ರಮುಖರಾದ ಸಹಾಯಕ ಆಯುಕ್ತೆ ರಶ್ಮಿ, ಕುಂದಾಪುರ ಡಿ.ಎಫ್ ಓ ಗಣಪತಿ, ಪೊಲೀಸ್ ಇಲಾಖೆಯ ಪರಮೇಶ್ವರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಾಜು ಮೊಗವೀರ, ಶ್ರೀನಿವಾಸ ಪ್ರಸಾದ್ ಮತ್ತಿತರರು ಇದ್ದರು.

ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಂ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಪ್ರಕಾಶ ಬಿ.ಬಿ ವಂದಿಸಿದರು. ರಾಘವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!