spot_img
Wednesday, March 4, 2026
spot_img

ಫೆ. 18ರಂದು ‘ಸಿನ್ಸ್-1999-ಶ್ವೇತಯಾನ’ ಬೆಳ್ಳಿ ಹಬ್ಬ ಸಂಭ್ರಮಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕೊಮೆಯ ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಸಾಂಸ್ಕೃತಿಕ ಸಂಘಟನೆ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ‘ಸಿನ್ಸ್-1999 ಶ್ವೇತಯಾನ’ ಕಾರ್ಯಕ್ರಮವು ಫೆ. 18ರಂದು ಸಮುದ್ಯತಾ ಸಹಯೋಗದೊಂದಿಗೆ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ಕನ್ನುಕೆರೆಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆರಿಯ ಮಾಸ್ತರ್ ತಿಳಿಸಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಫೆ. 18ರಂದು ಸಂಜೆ ಗಂಟೆ ೫ರಿಂದ ತೆಕ್ಕಟ್ಟೆ ಹಯಗ್ರೀವದಿಂದ ಪುರ ಮೆರವಣಿಗೆಯೊಂದಿಗೆ ಕನ್ನುಕೆರೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ತನಕ ಚಲಿಸಿ, ಸಂಜೆ ಗಂಟೆ 6:30ರಿಂದ ಕೇಂದ್ರದ ಕಲಿಕಾ ಮಕ್ಕಳಿಂದ ಕಾರ್ಯಕ್ರಮ ವೈವಿದ್ಯ ಪ್ರದರ್ಶನಗೊಳ್ಳಲಿದೆ. ಸಂಜೆ ಗಂಟೆ 7ರಿಂದ ಆರಂಭವಾಗುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಾಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಿತಿಯ ಕಾರ್ಯಾಧ್ಯಕ್ಷ ಸುಜಯ್ ಶೆಟ್ಟಿ, ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನದ ವಿದ್ವಾಂಸ ಪವನ್ ಕಿರಣ್‌ಕೆರೆ ಶುಭಾಸಂಶನೆ ಮಾಡಲಿದ್ದಾರೆ ಎಂದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕಾಂಗ್ರೇಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ, ತಲ್ಲೂರು ಶಿವರಾಮ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಕನ್ನಡ ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಕಲಾರಂಗದ ಕಾರ್ಯದರ್ಶಿ ಮುರಳಿ ಕಡೇಕಾರ್, ಉದ್ಯಮಿ ಅರುಣ್ ಕುಮಾರ್ ಶೆಟ್ಟಿ, ಸಮುದ್ಯತಾದ ಯೋಗೀಂದ್ರ, ಸೀತಾರಾಮ ಶೆಟ್ಟಿ ಮಲ್ಯಾಡಿ ಉಪಸ್ಥಿತರಿರುವರು.

ರಾತ್ರಿ ಗಂಟೆ ೮ರಿಂದ ಕಲಾ ಪೋಷಕರ ಕಲಾವಂತಿಕೆಯಲ್ಲಿ ಪುರಾಣ ಕಥಾ ಕಲ್ಯಾಣಿ ಯಕ್ಷಗಾನ ಪ್ರದರ್ಶನ ವಿಶೇಷ ಆಕರ್ಷಣೆಯಾಗಿರುತ್ತದೆ. ಸಂಭ್ರಮಾಚರಣೆ ವರ್ಷ ಪೂರ್ತಿ ನಡೆಯಲಿದ್ದು ವಾರಾಂತ್ಯದ ಪ್ರತೀ ಶನಿವಾರ ಮತ್ತು ಭಾನುವಾರ ಸುಮಾರು 108 ವೈವಿದ್ಯಮಯ ಜಿಲ್ಲೆ ಹಾಗೂ ಹೊರರಾಜ್ಯಗಳ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. 2025ರ ಮಾರ್ಚ್ 25ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿದರು.

ಉಪನ್ಯಾಸಕ ರಾಘವೇಂದ್ರ ತುಂಗ, ಕಾರ್ಯಾಧ್ಯಕ್ಷರಾದ ಸುಜಯ್ ಶೆಟ್ಟಿ, ಗೋಪಾಲ ಪೂಜಾರಿ, ಅಧ್ಯಕ್ಷ ಸೀತಾರಾಮ ಶೆಟ್ಟಿ ಮಲ್ಯಾಡಿ, ಸಂಘಟನಾ ಕಾರ್ಯದರ್ಶಿ ಶ್ರೀಶ ಭಟ್, ಹೆರಿಯ ಮಾಸ್ತರ್, ವೆಂಕಟೇಶ ವೈದ್ಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸುದ್ಧಿಗೊಷ್ಠಿಯಲ್ಲಿ ಬಿಡುಗೊಡೆಗೊಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!