Sunday, September 8, 2024

ಸೋಶಿಯಲ್‌ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ನೀಡಲಿದೆಯಂತೆ ಪ್ರಶಸ್ತಿ ! ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ನವದೆಹಲಿ) : ಸಾಮಾಜಿಕ ಜಾಲತಾಣಗಳ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಇಂದು(ಶನಿವಾರ) ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಂಟೆಂಟ್ ಕ್ರಿಯೇಟರ್ಸ್‌ಗೆ ‘ಪ್ರಶಸ್ತಿ’ ನೀಡಲು ಮೋದಿ ನೇತೃತ್ವದ ಸರ್ಕಾರ ತೀರ್ಮಾನ ಮಾಡಿದೆ.

ಹೌದು, ಸೋಶಿಯಲ್‌ ಮೀಡಿಯಾ ಇನ್ಫ್ಲುವೆನ್ಸರ್ ಮತ್ತು ಕಂಟೆಂಟ್ ಕ್ರಿಯೇಟರ್ಸ್ ಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ʼನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿʼ ನೀಡಲು ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

“Gen Z” ಅನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಸುಮಾರು 20 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು. ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ದೇಶದ ಮೃದು ಶಕ್ತಿ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಇತರ ವಿಭಾಗಗಳು “ಗ್ರೀನ್ ಚಾಂಪಿಯನ್ಸ್”, “ಸ್ವಚ್ಛತಾ ರಾಯಭಾರಿಗಳು”, “ಕೃಷಿ ಸೃಷ್ಟಿಕರ್ತರು” ಮತ್ತು “ಟೆಕ್ ಕ್ರಿಯೇಟರ್ಸ್” ವಿಭಾಗಗಳಲ್ಲೂ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿವಿಧ ಭಾಷೆ ಮತ್ತು ವಿಭಾಗಗಳ ಚಲನಚಿತ್ರಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಮಾದರಿಯಲ್ಲಿ ಪ್ರಶಸ್ತಿಗಳು ಇರುತ್ತವೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!