spot_img
Wednesday, January 22, 2025
spot_img

ನಮ್ಮ ಸರ್ಕಾರದ ಯೋಜನೆಗಳ ಹೆಚ್ಚಿನ ಫಲಾನುಭವಿಗಳು ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಸಮುದಾಯದವರು : ಮೋದಿ

ಜನಪ್ರತಿನಿಧಿ (ಗುಜರಾತ್): ನಮ್ಮ ಸರ್ಕಾರದ ಬಡವರ ಪರ ಯೋಜನೆಗಳ ಹೆಚ್ಚಿನ ಫಲಾನುಭವಿಗಳು ದಲಿತರು, ಒಬಿಸಿಗಳು ಮತ್ತು ಬುಡಕಟ್ಟು ಸಮುದಾಯದವರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 1.3 ಲಕ್ಷ ಮನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಯಾವುದೇ ಬಡ ವ್ಯಕ್ತಿಗೆ ಸ್ವಂತ ಮನೆ ಇದ್ದರೆ ಉತ್ತಮ ಭವಿಷ್ಯದ ಭರವಸೆ ಎಂದಿದ್ದಲ್ಲದೇ, ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತಂದಿರುವುದು ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಮೋದಿ ಪ್ರತಿಪಾದಿಸಿದ್ದಾರೆ.

1.3 ಲಕ್ಷ ಮನೆಗಳ ಅಂಕಿಅಂಶವನ್ನು ಕೂಲಂಕಶವಾಗಿ ಗಮನಿಸಿ. ನಾನು ಪಿಎಂಎವೈ ಅಡಿಯಲ್ಲಿ ಮನೆ ನೀಡುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೂ, ನಾನು ಅಂತಹ ಬೃಹತ್ ಅಂಕಿಅಂಶವನ್ನು ಗಮನಿಸಿರಲಿಲ್ಲ. ನಾನು ಗುಜರಾತ್ ಸರ್ಕಾರವನ್ನು ಅಭಿನಂದಿಸುತ್ತೇನೆ. ಯಾವುದೇ ಬಡ ವ್ಯಕ್ತಿಗೆ ಸ್ವಂತ ಮನೆ ಇರುವುದು ಉತ್ತಮ ಭವಿಷ್ಯದ ಭರವಸೆ ಎಂದು ಮೋದಿ ಹೇಳಿದ್ದಾರೆ.

ತಮ್ಮ ಸರ್ಕಾರ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ನಿರ್ಲಕ್ಷಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ, ನಮ್ಮ ಜನಪರ ಯೋಜನೆಗಳು ಬಡವರಿಗೆ ತಲುಪುತ್ತಿದೆ ಎಂದು ಹೇಳಿದ್ದು, ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಅಭಿವೃದ್ಧಿ ಹೊಂದಿದ ಭಾರತದ ಆಧಾರ ಸ್ತಂಭಗಳು ಎಂದರು.

ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರುವುದೇ ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಪ್ರಧಾನಿ ಹೇಳಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!