spot_img
Wednesday, March 4, 2026
spot_img

ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿ, ಬಳಿಕ ರೈತ ಪರ ಬಜೆಟ್ ರೂಪಿಸಲು ರೈತ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದು ಅವರು ಹೇಳಿದ್ದಾರೆ.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಅವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು.  ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ.  ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!