spot_img
Thursday, March 5, 2026
spot_img

‘ಭಾವೈಕ್ಯ’ ಬಂಟರ ಮಹಾಸಮಾಗಮ: ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ಪರ್ಧೆ ಉದ್ಘಾಟನೆ

ಕುಂದಾಪುರ: ಫೆ.11: ಕುಂದಾಪುರ ತಾಲೂಕು ಯುವ ಬಂಟರ ಸಂಘ ರಿ., ಕುಂದಾಪುರ ಇದರ ದಶಮ ಸಂಭ್ರಮದ ಅಂಗವಾಗಿ ಭಾವೈಕ್ಯ ಬಂಟರ ಮಹಾಸಮಾಗಮ ಕಾರ್ಯಕ್ರಮ ಫೆಬ್ರವರಿ 11 ಭಾನುವಾರ ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ ಕೋಟೇಶ್ವರ ಇಲ್ಲಿ ಬಂಟರ ಸಾಂಸ್ಕೃತಿಕ ಸಂಭ್ರಮ ಉದ್ಘಾಟನೆಗೊಂಡಿತು.

ಬಂಟರ ಸಾಂಸ್ಕೃತಿಕ ಸಂಭ್ರಮ-ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ಪರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್.ಎಸ್.ಹೆಗ್ಡೆ ಉದ್ಘಾಟಿಸಿದರು.

ಉದ್ಘಾಟನಾ ಮಾತುಗಳನ್ನಾಡಿದ ಅವರು, ಕುಂದಾಪುರ ಯುವ ಬಂಟರ ಸಂಘ ಅಭೂತಪೂರ್ವವಾದ ಕಾರ್ಯಕ್ರಮವನ್ನು ಸಂಘಟಿಸಿದೆ. ಬಂಟರನ್ನು ಒಂದು ಕಡೆ ಸೇರುವಂತೆ ಮಾಡಿದ ಮಾದರಿ ಕಾರ್ಯಕ್ರಮ ಇದಾಗಿದೆ. ಬಂಟರ ಸಾಂಸ್ಕೃತಿಕ ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದೆ. ಇಂಥಹ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಮತ್ತು ಅವರ ತಂಡದವರ ಶ್ರಮ ಶ್ಲಾಘನೀಯ ಎಂದರು.

ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಸಿ‌ಎಂಡಿ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ, ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ, ಮೈಸೂರು ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ.ಸತೀಶ ಕುಮಾರ್ ಶೆಟ್ಟಿ, ಉಡುಪಿ ಬಂಟರ ಸಂಘದ ಅಧ್ಯಕ್ಷರಾದ ಪುರುಷೊತ್ತಮ ಶೆಟ್ಟಿ, ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ವಸಂತ ಹೆಗ್ಡೆ, ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘದ ಸಹಸಂಚಾಲಕ ಅಶೋಕ ಶೆಟ್ಟಿ ಸಂಸಾಡಿ, ಬಂಟರ ಯಾನೆ ನಾಡವರ ಸಂಘ ಶಿರೂರು ಅಧ್ಯಕ್ಷರಾದ ಶ್ರೀನಿವಾಸ ಶೆಟ್ಟಿ, ಬೈಂದೂರು ಯುವ ಬಂಟರ ಸಂಘದ ಅಧ್ಯಕ್ಷರಾದ ರವಿ ಶೆಟ್ಟಿ ಕುದ್ರುಕೋಡು, ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ.ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!