spot_img
Sunday, April 19, 2026
spot_img

ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಪಕ್ಷಕ್ಕೆ ವಿದಾಯ ಹೇಳಿದ ಮಹಾರಾಷ್ಟ್ರದ ಮಾಜಿ ಸಿಎಂ !

ಜನಪ್ರತಿನಿಧಿ (ಮುಂಬೈ) : ಲೋಕಸಭಾ ಸನಿಹವಾಗುತ್ತಿದ್ದಂತೆ ದೇಶದ ಅತ್ಯಂತ ಹಿರಿಯ ಪಕ್ಷ ಕಾಂಗ್ರೆಸ್‌ ಗೆ ಮತ್ತೊಂದು ಆಘಾತವಾಗಿದೆ. ಹೌದು ಮಹಾರಾಷ್ಟ್ರ ಕಾಂಗ್ರೆಸ್‌ ನಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್‌ಗೆ ವಿದಾಯ ಹೇಳಿದ್ದಾರೆ.

ಇಂದು(ಸೋಮವಾರ) ಅಶೋಕ್ ಚವಾಣ್ ಅವರು ಮುಂಬೈನಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಅವರನ್ನು ಭೇಟಿಯಾದ ಬಳಿಕೆ ಅವರು ಬಿಜೆಪಿ ಸೇರ್ಪಡೆಗೊಳ್ಳುವ ಬಗ್ಗೆ ಊಹಾಪೋಹಗಳು ಹುಟ್ಟಿಕೊಂಡಿದ್ದು, ಕಾಂಗ್ರೆಸ್ ಗೆ ವಿದಾಯ ಹೇಳಿರುವ ಬೆನ್ನಿಗೆ ಈ ವದಂತಿಗಳಿಗೆ ಬಲ ಬಂದಂತಾಗಿದೆ.

ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆಯೇ ಕಾಂಗ್ರೆಸ್‌ಗೆ  ದೊಡ್ಡ ಆಘಾತವೇ ಆಗಿದೆ. ಅಲ್ಲದೆ ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಮೂಲಗಳ ಪ್ರಕಾರ ಅಶೋಕ್ ಚಾವಾಣ್ ರನ್ನು ಬಿಜೆಪಿ ರಾಜ್ಯಸಭೆಗೆ ಆಯ್ಕೆ ಮಾಡಬಹುದು ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ಗೆ 2ನೇ ಆಘಾತ
ಕಾಂಗ್ರೆಸ್ ಒಂದು ತಿಂಗಳ ಅವಧಿಯಲ್ಲಿ 2ನೇ ಆಘಾತ ಇದಾಗಿದ್ದು, ತಿಂಗಳ ಹಿಂದಷ್ಟೇ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಳೆದ ತಿಂಗಳು ಪಕ್ಷವನ್ನು ತೊರೆದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣಕ್ಕೆ ಸೇರಿದ್ದರು. ಅಂತೆಯೇ ಮಾಜಿ ರಾಜ್ಯ ಸಚಿವ ಬಾಬಾ ಸಿದ್ದಿಕ್ ಪಕ್ಷವನ್ನು ತೊರೆದು ಈ ತಿಂಗಳ ಆರಂಭದಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.  

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!