spot_img
Thursday, March 5, 2026
spot_img

ರಾಜ್ಯ ಬಜೆಟ್‌ ಅಧಿವೇಶನ : ರಾಜ್ಯಪಾಲರಿಂದ ಕಾಂಗ್ರೆಸ್‌ ಸರ್ಕಾರ ಸುಳ್ಳು ಹೇಳಿಸಿದೆ : ಆರ್‌ ಅಶೋಕ್‌ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ಗೌರವಾನ್ವಿತ ರಾಜ್ಯಪಾಲರಿಂದ ಸುಳ್ಳುಗಳನ್ನು, ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಯೋಜನೆಗಳನ್ನು, ಕೇಂದ್ರ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು ನಾವೇ ಜಾರಿಗೆ ತಂದಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುವಂತಹ ಒಂದು ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇಂದು(ಸೋಮವಾರ) ಮಾಡಿದೆ ದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ರಾಜ್ಯ ಬಜೇಟ್‌ ಅಧಿವೇಶನದಲ್ಲಿ ರಾಜ್ಯಪಾಲರು ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದರು. ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ತೆರಿಗೆ ವಂಚನೆಯ ಬಗ್ಗೆ ಪ್ರಸ್ತಾಪಿಸಿದ್ದರು.

ರಾಜ್ಯ ಪಾಲರ ಭಾಷಣದ ಬಳಿಕ ಮಾತನಾಡಿದ ಆರ್.‌ ಅಶೋಕ್‌, ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ. ಆದರೇ, ಇನ್ನೂ ಐದನೇ ಗ್ಯಾರಂಟಿ ಪ್ರಾರಂಭವೇ ಆಗಿಲ್ಲ. ಒಬ್ಬ ನಿರುದ್ಯೋಗಿ ಯುವಕನಿಗೂ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಸಿಕ್ಕಿಲ್ಲ. ಬರದ ವಿಚಾರದಲ್ಲಿ ಎರಡು ಸಾವಿರ ಪರಿಹಾರ ನೀಡಿದ್ದೇವೆ ಎಂದು ಕಾಂಗ್ರೆಸ್‌ ಸರ್ಕಾರ ತನ್ನನ್ನು ತಾನು ಸಮರ್ಥಿಸಿಕೊಳ್ಳುತ್ತದೆ. ರೈತರಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಿಂದ ಮಾಡಿಸಿದೆ. ರಾಜ್ಯಪಾಲರಿಂದ ಕಾಂಗ್ರೆಸ್‌ ಸರ್ಕಾರ ಸುಳ್ಳು ಹೇಳಿಸಿದೆ. ರಾಜ್ಯಪಾಲರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾಹಿತಿ ನೀಡದೆ, ಬರ ಪರಿಹಾರ ನೀಡದೇ ಇರುವ ಕುರಿತು ರಾಜ್ಯಪಾಲರಿಗೆ ತಿಳಿಸದೆ ಬರೀ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಭಾಷಣ ಮಾಡಿಸಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!