spot_img
Thursday, March 5, 2026
spot_img

ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ ಉದ್ಘಾಟನೆ

ಕುಂದಾಪುರ: ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಮತ್ತು ಕಲಾ ಮೇಳ ನಡೆಯಿತು.

ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾತನಾಡಿ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಇಂಥಹ ಕಾರ್ಯಕ್ರಮಗಳು ಹೆಚ್ಚು ಔಚಿತ್ಯಪೂರ್ಣ. ವಿಜ್ಞಾನ ವಿಷಯದಲ್ಲಿ ಮಕ್ಕಳು ಆಸಕ್ತಿಯಿಂದ ತೊಡಗಿಸಿಕೊಂಡಿದ್ದಾರೆ. ಈ ಪ್ರಕ್ರಿಯೆ ಪ್ರತೀ ವರ್ಷ ಹೀಗೆ ನೆಡೆಯಲಿ ಎಂದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಜು ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾ.ಪಂ.ಸದಸ್ಯರು ಹಾಗೂ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಗ್ರಾ.ಪಂ ಸದಸ್ಯೆ ಶಶಿಕಲಾ ವಂಡ್ಸೆ, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಖಜಾಂಚಿ ಜಿ.ಶ್ರೀಧರ ಶೆಟ್ಟಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ಆನಂದ ಶೆಟ್ಟಿ, ಉದ್ಯಮಿ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಕೊಲ್ಲೂರು ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ಭಾಸ್ಕರ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಮಂಜರು ಶಾಲೆಗೆ ಧ್ವನಿವರ್ದಕವನ್ನು ಕೊಡುಗೆಯಾಗಿ ನೀಡಿದರು. ಪ್ರಕಾಶ್ಚಂದ್ರ ಶೆಟ್ಟಿಯವರು ಶಬ್ದಕೋಶಗಳನ್ನು ನೀಡಿದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಸದಾಶಿವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಕಾರ್ಯಕ್ರಮ ನಿರ್ವಹಿಸಿದರು.
4ನೇ ತರಗತಿಯಿಂದ ೭ನೇ ತರಗತಿಯ ತನಕ ವಿದ್ಯಾರ್ಥಿಗಳು ಪಠ್ಯಕ್ಕೆ ಸಂಬಂಧಿಸಿದ ವಿಜ್ಞಾನ ಮಾದರಿ ಹಾಗೂ ಪ್ರಯೋಗಗಳನ್ನು ತಮ್ಮದೇ ಪರಿಕಲ್ಪನೆಯಲ್ಲಿ ಪ್ರದರ್ಶನ ಮಾಡಿದ್ದರು, ಸುಮಾರು 150ಕ್ಕೂ ಹೆಚ್ಚು ವಿಜ್ಞಾನ ಮಾದರಿಗಳು ಹಾಗೂ ಪ್ರಯೋಗಗಳ ಪ್ರದರ್ಶನ ನಡೆಯಿತು. ಜೊತೆಯಲ್ಲಿ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಕ್ಕಳೇ ತಯಾರಿಸಿದ ವಿವಿಧ ಕ್ರಾಫ್ಟ್ ಪ್ರದರ್ಶನವೂ ನಡೆಯಲಿದೆ. ಶಾಲೆಯ ಎಲ್ಲ ಮಕ್ಕಳು ಕಲಾ ಮೇಳದಲ್ಲಿ ತಮ್ಮ ಕ್ರಾಪ್ಟ್ ವಿನ್ಯಾಸಗಳನ್ನು ಪ್ರದರ್ಶನ ಮಾಡಿದ್ದರು.

ವಿಶೇಷವಾಗಿ ರಾಕೇಟ್, ಚಂದ್ರಯಾನ ಉಡ್ಡಯನ ಮೊದಲಾದ ವಿಜ್ಞಾನ ಮಾದರಿಗಳು ಗಮನ ಸಳೆದವು. ಬಣ್ಣ ಬಣ್ಣದ ವಿವಿಧ ವಿನ್ಯಾಸಗಳ ಕ್ರಾಪ್ಟ್ ಗಳು ಕಲಾ ಮೇಳದ ರಂಗು ಹೆಚ್ಚಿಸಿದ್ದವು. ವಿದ್ಯಾರ್ಥಿಗಳು ಆಂಗ್ಲ ಭಾಷೆಯಲ್ಲಿಯೇ ಮಾದರಿಗಳನ್ನು ಗಣ್ಯರು, ಸಾರ್ವಜಕರಿಗೆ ವಿವರಿಸಿದರು. ಬೆಳಿಗ್ಗೆಯಿಂದ ಸಂಜೆಯ ತನಕ ಸಾರ್ವಜನಿಕರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಭೇಟಿ ನೀಡಿ ಮಕ್ಕಳ ಪ್ರಯೋಗಶೀಲತೆಯನ್ನು ಪ್ರಶಂಸಿಸಿದರು.

ಶೂನ್ಯ ಬಂಡವಾಳ ಹಾಗೂ ಶೂನ್ಯ ಸಮಯದಲ್ಲಿ ವಿಜ್ಞಾನದ ಮಾದರಿಗಳನ್ನು ಮಕ್ಕಳು ತಯಾರಿಸಿದ್ದಾರೆ. ಕಸದಿಂದ ರಸ ಎನ್ನುವ ಯೋಚನೆಯಲ್ಲಿ ನಿರುಪಯೂಕ್ತ ವಸ್ತುಗಳನ್ನು ಬಳಸಿಕೊಂಡು ವಿವಿಧ ವಿಜ್ಞಾನದ ಮಾದರಿಗಳು-ಪ್ರಯೋಗಗಳನ್ನು ಮಾಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ವಿಜ್ಞಾನ-ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಮಗು ಪ್ರಾಥಮಿಕ ಹಂತದಿಂದಲೇ ವಿಜ್ಞಾನದ ಬಗ್ಗೆ ಕುತೂಹಲ ಹಾಗೂ ಶೋಧನಾ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎನ್ನುವ ನೆಲೆಯಲ್ಲಿ ವಿಜ್ಞಾನದ ಪ್ರಯೋಗಳಿಗೆ ಒತ್ತನ್ನು ನೀಡಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!