spot_img
Thursday, March 5, 2026
spot_img

ರಾಷ್ಟ್ರಗೀತೆಗೆ ಸ್ಟಾಲಿನ್ ಸರ್ಕಾರ ವಿರೋಧಿಸಿದೆ ಎಂದು ಆರೋಪಿಸಿ ಹೊರ ನಡೆದ ರಾಜ್ಯಪಾಲ ಆರ್‌ಎನ್ ರವಿ !

ಜನಪ್ರತಿನಿಧಿ (ಚೆನ್ನೈ) : ರಾಷ್ಟ್ರಗೀತೆಗೆ ಡಿಎಂಕೆ ಸರ್ಕಾರ ವಿರೋಧ ವ್ಯಕ್ತಪಡಿಸಿದೆ ಎಂದು ಆರೋಪಿಸಿ ರಾಜ್ಯಪಾಲ ರವಿ ಅವರು ಕಾರ್ಯಕ್ರಮ ಮೊಟಕುಗೊಳಿಸಿ ಹೊರ ನಡೆದ ಘಟನೆ ಇಂದು (ಸೋಮವಾರ) ನಡೆದಿದ್ದು, ಈ ಮೂಲಕ ತಮಿಳುನಾಡು ವಿಧಾನಸಭೆಯಲ್ಲಿ ದು ದೊಡ್ಡ ಹೈಡ್ರಾಮಾವೇ ಸೃಷ್ಟಿಯಾಗಿದೆ.  

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ವಿಧಾನಸಭೆಯ ಅಧಿವೇಶನದ ಆರಂಭಿಕ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸಿದ್ದು, ಸದನ ಆರಂಭವಾಗುವ ಮುನ್ನ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಬೇಕೆಂದು ಸಲಹೆ ನೀಡಿದ್ದೆ ಆದರೆ ಅವರು ನಿರ್ಲಕ್ಷಿಸಿದ್ದಾರೆ ಎಂದು ಹೇಳಿ ಸದನದಿಂದ ಹೊರನಡೆದಿರುವ ಘಟನೆ ಈಗ ರಾಷ್ಟ್ರವ್ಯಾಪಿ ಟೀಕೆಗೆ ಕಾರಣವಾಗಿದೆ.

ರಾಷ್ಟ್ರಗೀತೆಗೆ ಗೌರವ ಕೊಡದ ಕಾರಣ ನನಗೆ ಭಾಷಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ತಮಿಳುನಾಡು ವಿಧಾನಸಭೆಯಿಂದ ರಾಜ್ಯಪಾಲ ಆರ್​ ಎನ್​ ರವಿ ಹೊರನಡೆದಿದ್ದು, ಸದನ ಆರಂಭ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆ ಹಾಡುವಂತೆ ಎನ್​ ರವಿ ಸಲಹೆ ನೀಡಿದ್ದರು. ಆದರೆ ಸ್ಟಾಲಿನ್ ಸರ್ಕಾರವು ಅದನ್ನು ನಿರಾಕರಿಸಿದೆ. ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರು ಸದನದಿಂದ ಹೊರ ನಡೆದಿದ್ದಾರೆ.

ಈಬೆಳವಣಿಗೆ ಬೆನ್ನಲ್ಲೇ ವಿಧಾನಸಭೆಯಲ್ಲಿ ಸರ್ಕಾರ ನೀಡಿದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದ ಆರ್​ಎನ್​ ರವಿ ವಿಧಾನಸಭೆಯಿಂದ ಹೊರಹೋಗಿದ್ದಾರೆ.

ಈ ಬಗ್ಗೆ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಮಾತನಾಡಿ, ತಮಿಳುನಾಡು ವಿಧಾನಸಭೆಯ ಅಧಿವೇಶನದ ಆರಂಭ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡುವಂತೆ ರಾಜ್ಯಪಾಲರು ವಿನಂತಿಸಿದ್ದರು.

ಅವರ ಸಲಹೆಯನ್ನು ನಿರ್ಲಕ್ಷಿಸಿದ ಕಾರಣ ಅವರು ಸಾಂಪ್ರದಾಯಿಕ ಭಾಷಣ ಮಾಡಲು ನಿರಾಕರಿಸಿದ್ದು, ಇದು ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಮಸ್ಯೆಯಾಗಿದೆ ಎಂದಿದ್ದಾರೆ. ತಮಿಳುನಾಡು ಸರ್ಕಾರ ತಮಗಾಗಿ ಸಿದ್ಧಪಡಿಸಿರುವ ಭಾಷಣದಲ್ಲಿ ಮಾಡಿರುವ ಕೆಲವು ಟೀಕೆಗಳನ್ನು ಒಪ್ಪುವುದಿಲ್ಲ ಎಂದು ಹೇಳುತ್ತಾ ಭಾಷಣ ಮುಗಿಸಿದರು. ಕೆಲವೇ ನಿಮಿಷಗಳಲ್ಲಿ ರಾಜ್ಯಪಾಲರು ಭಾಷಣ ಮುಗಿಸಿ ಹೊರ ನಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!