spot_img
Thursday, March 5, 2026
spot_img

ʼಇಂಡಿಯಾʼ ಮೈತ್ರಿಕೂಟಕ್ಕೆ ಮತ್ತೆ ಆಘಾತ : ಮೈತ್ರಿ ತೊರೆದ ಆರ್‌ಎಲ್‌ಡಿ

ಜನಪ್ರತಿನಿಧಿ (ನವ ದೆಹಲಿ ) : ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ, ಜನತೆಗೆ ಏನಾದರೂ ಒಳ್ಳೆಯದನ್ನು ಮಾಡಬೇಕೆಂದು ಬಯಸಿ ಎನ್‌ಡಿಎ ಸೇರ್ಪಡೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ ಇಂದು(ಸೋಮವಾರ) ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಅವರು, ”ಈ ನಿರ್ಧಾರದ ಹಿಂದೆ ಯಾವುದೇ ದೊಡ್ಡ ಯೋಜನೆ ಇರಲಿಲ್ಲ, ಕೆಲವು ಪರಿಸ್ಥಿತಿಯಿಂದಾಗಿ ನಾವು ಅಲ್ಪ ಸಮಯದೊಳಗೆ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾತುಕತೆಯನ್ನೂ ಮುಗಿಸಿದ್ದ ಜಯಂತ್ ಚೌಧರಿ ಅವರು ʼಇಂಡಿಯಾʼ ಮೈತ್ರಿಕೂಟದ ಭಾಗವಾಗವಾಗಿದ್ದರು. ಅಜ್ಜ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ʼಭಾರತ ರತ್ನʼ ಪ್ರಶಸ್ತಿ ಘೋಷಿಸಿದ ಬೆನ್ನಲ್ಲೇ ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಾಗುವುದಾಗಿ ಸ್ಪಷ್ಟಪಡಿಸಿದ್ದರು.

ಫೆ.೦೯ಕ್ಕೆ ಪ್ರಧಾನಿ ಮೋದಿ ಅವರು ಚೌಧರಿ ಚರಣ್‌ ಸಿಂಗ್‌ ಅವರಿಗೆ ಭಾರತ ರತ್ನ ಪ್ರಶಶ್ತಿಯನ್ನು ಘೋಷಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!