spot_img
Friday, March 6, 2026
spot_img

ಕೇಂದ್ರದ ಮೇಲೆ ಗೂಬೆ ಕೂರಿಸಿ ಬಚಾವಾಗುವುದಕ್ಕೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಆರ್‌ ಅಶೋಕ್‌ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ಕಳೆದ ಎಂಟು ತಿಂಗಳಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದಾರಿ ತಪ್ಪಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಇರುವಂತ ಸರ್ಕಾರ ಇದು. ಬರದ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸಿ ಬಚಾವಾಗುವುದಕ್ಕೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ರೈತರಿಗೆ ಇನ್ನೂ ಹಣ ಬಿಡುಗೆ ಮಾಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಂತೂ ಪಾತಾಳಕ್ಕೆ ತಲುಪಿದೆ. ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಶಾಸಕರು ಮಾಹಿತಿ ನೀಡಿದ್ದಾರೆ. ಕಳೆದ ಎಂಟು ತಿಂಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಒಂದೇ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ನಮ್ಮ ಸರ್ಕಾರದಲ್ಲಿ ನೀಡಿದ್ದ ಎಲ್ಲಾ ಅನುದಾನಗಳನ್ನು ತಡೆಹಿಡಿದು ವಾಪಾಸ್‌ ಪಡೆಯುತ್ತಿದ್ದಾರೆ. ಈ ಎಲ್ಲದರ ವಿರುದ್ಧ ಧ್ವನಿ ಎತ್ತುವದರ ಬಗ್ಗೆ ಪಕ್ಷ ಮಟ್ಟದಲ್ಲಿ ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಅಧಿವೇಶನದಲ್ಲಿ ಸರ್ಕಾರದ ಲೋಪ ದೋಷಗಳನ್ನು ಪ್ರಸ್ತಾಪಿಸುವುದು ಹಾಗೂ ಪ್ರತಿಭಟಿಸುವುದು ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸರ್ಕಾರದ ಭ್ರಷ್ಟಾಚಾರವನ್ನು ಕೂಡ ಜನರ ಎದುರಿಗಿಡುವುದರ ಬಗ್ಗೆ ಶಾಸಕಾಂಗ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!