spot_img
Monday, June 23, 2025
spot_img

ಕೇಂದ್ರ ಸರ್ಕಾರದ ವಿರುದ್ಧ ರೈತರ ದೆಹಲಿ ಚಲೋ ಪ್ರತಿಭಟನೆ : ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸರಿಂದ ಅಶ್ರುವಾಯು ಪ್ರಯೋಗ !

ಜನಪ್ರತಿನಿಧಿ (ನವ ದೆಹಲಿ) : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೊರಟಿರುವ ಸಾವಿರಾರು ರೈತರು ಪಂಜಾಬ್‌ ಹಾಗೂ ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನಿಸಿದ್ದಾರೆ ಎಂದು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರೈತರ ಈ ಬೃಹತ್‌ ದಿಲ್ಲಿ ಚಲೋ ಯಾತ್ರೆಯನ್ನು ತಡೆಯಲು ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು, ದೆಹಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಯಪಿ ಗೇಟ್‌ ಅನ್ನು ಸೀಲ್‌ ಮಾಡಿದ್ದಾರೆ. ಹಲವೆಡೆ ಕಾಂಕ್ರೀಟ್‌ ಗೋಡೆಗಳು ಮತ್ತು ತಂತಿಗಳನ್ನು ಅಳವಡಿಸಲಾಗಿದ್ದು, ಈ ಮೂಲಕ ರೈತರು ದೆಹಲಿ ಪ್ರವೇಶಿಸುವುದನ್ನು ತಡೆಯುವ ಯತ್ನ ಮಾಡಲಾಗಿದೆ.

ಬೆಳಿಗ್ಗೆ 10 ಗಂಟೆಗೆ ರೈತರು ತಮ್ಮ ಚಲೋ ದೆಹಲಿ ಮೆರವಣಿಗೆಯನ್ನು ಪ್ರಾರಂಭಿಸುತ್ತಿದ್ದಂತೆ, ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್ ಅವರು ಪಂಜಾಬ್ ಹಾಗೂ ಹರಿಯಾಣ ನಡುವಿನ ಗಡಿಗಳು ರಾಜ್ಯ ಗಡಿಯಂತೆ ಕಾಣುತ್ತಿಲ್ಲ ಆದರೆ ಅಂತರರಾಷ್ಟ್ರೀಯ ಗಡಿಗಳಂತೆ ಕಾಣುತ್ತವೆ ಎಂದು ಹೇಳಿದರು.

ಮಾತ್ರವಲ್ಲದೇ, ಕಳೆದ ಎರಡು-ಮೂರು ದಿನಗಳಿಂದ ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದೆ” ಎಂದೂ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಪಂಧೇರ್ ತಿಳಿಸಿದ್ದಾರೆ.

ಇನ್ನು, ರೈತರು ದೆಹಲಿಯೊಳಗೆ ಬಂದರೆ ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಕಾರಾಗೃಹವಾಗಿ ಪರಿವರ್ತಿಸುವ ಕೇಂದ್ರದ ಮನವಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.

ಈ  ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಗೃಹ ಸಚಿವ ಕೈಲಾಶ್ ಗೆಹ್ಲೋಟ್ ಅವರು, ‘ರೈತರ ಬೇಡಿಕೆಗಳು ಸತ್ಯದಿಂದ ಕೂಡಿವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕಾಗಿದೆ. ಆದ್ದರಿಂದ ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ರೈತರ ಬೇಡಿಕೆಗಳು ಸಮಂಜಸವಾಗಿವೆ. ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕಾಗಿದೆ. ಆದ್ದರಿಂದ ರೈತರನ್ನು ಬಂಧಿಸುವುದು ಸರಿಯಲ್ಲ. ಸ್ಟೇಡಿಯಂ ಅನ್ನು ಜೈಲಾಗಿ ಪರಿವರ್ತಿಸುವ ಕೋರಿಕೆಗೆ ತಮ್ಮ ಸರ್ಕಾರದ ಸಮ್ಮತಿ ಇಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರೈತರ ಜೊತೆಗೆ ಮಾತುಕತೆ ನಡೆಸಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ದೇಶದ ರೈತರು ನಮ್ಮ ಅನ್ನದಾತರು. ಅವರನ್ನು ಬಂಧಿಸುವ ಮೂಲಕ ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಆಪ್​ ಸರ್ಕಾರದ ಬೆಂಬಲವಿಲ್ಲ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!