spot_img
Friday, March 6, 2026
spot_img

ಉಡುಪಿಯಲ್ಲಿ ಸಿಜಿಎಚ್‌ಎಸ್‌ ವೆಲ್ನೆಸ್‌ ಸೆಂಟರ್‌ ತೆರೆಯಲು ಕೇಂದ್ರ  ಸರ್ಕಾರ ಅನುಮೋದನೆ !

ಜನಪ್ರತಿನಿಧಿ (ಉಡುಪಿ) : ಭಾರತ ಸರಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸೆಂಟ್ರಲ್‌ ಗವರ್ನಮೆಂಟ್‌ ಹೆಲ್ತ್‌ ಸ್ಕೀಮ್‌ ವೆಲ್ನೆಸ್‌ ಸೆಂಟರ್‌ ಅನ್ನು ಉಡುಪಿಯಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ  ಸರಕಾರ ಅನುಮೋದನೆ ನೀಡಿದೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಖಾತೆ ಸಚಿವರೂ ಹಾಗೂ ಉಡುಪಿ – ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರಿದ್ದು, ಫೆ.2023ರಲ್ಲಿ ಕೇಂದ್ರ ಆರೋಗ್ಯ ಸಚುವರಿಗೆ ಭೇಟಿಯಾಗಿ ಉಡುಪಿಯಲ್ಲಿ ಸಿಗಿಎಚ್‌ಎಸ್‌ ವೆಲ್ನೆಸ್‌ ಸೆಂಟರ್‌ ಅನ್ನು ತೆರೆಯುವಂತೆ ಮನವಿ ಮಾಡಿದ್ದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನಸುಖ್‌ ಮಾಂಡವೀಯಾ ಅವರು ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದು ಉಡುಪಿ ಸೇರಿದಂತೆ ದೇಶದ 20 ನಗರಗಳಲ್ಲಿ ಸಿಜಿಎಚ್‌ಎಸ್‌ ವೆಲ್ನೆಸ್‌ ಸೆಂಟರ್‌ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿರುವುದಾಗಿ ಸಂಸದರ ಕಛೇರಿ ಮಾಹಿತಿ ನೀಡಿದೆ.

ಉಡುಪಿ ಹಾಗೂ ನೆರೆಯ ಜಿಲ್ಲೆಗಳಲ್ಲಿ 46ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 4500 ಉದ್ಯೋಗಿಗಳಿದ್ದು, 9000ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿದ್ದಾರೆ. ಉಡುಪಿಯಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ.ತಮ್ಮ ಮನವಿಯನ್ನು ಪುರಸ್ಕರಿಸಿ ಉಡುಪಿಗೆ ಸಿಜಿಎಚ್‌ಎಸ್‌ ವೆಲ್ನೆಸ್‌ ಸೆಂಟರ್‌ ಅನ್ನು ಮಂಜೂರು ಮಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನಸುಖ್‌ ಮಾಂಡವೀಯಾ ಅವರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!