spot_img
Friday, March 6, 2026
spot_img

ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : “ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ. ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು.

ಬಸವ ಜಯಂತಿ ಆಚರಿಸಿ, ಬದುಕಿನ ಕಷ್ಟಗಳಿಗೆ ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಬಸವಾದಿ ಶರಣರ ಆಶಯದಂತೆ ಸಮಾಜ ಮೊದಲು ಮೌಢ್ಯಗಳಿಂದ ಆಚೆ ಬರಬೇಕು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು  ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ. ಬಿಜಾಪುರ ಮಹಿಳಾ ವಿಸ್ವವಿದ್ಯಾಲಯಕ್ಕೆ ಅಕ್ಕಮಹಹಾದೇವಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಿದ್ದು ನಮ್ಮ ಸರ್ಕಾರ. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿದ್ದೇವೆ. ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿದೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ ಈ ಎಲ್ಲ ಮಹನೀಯರು ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯನ್ನು ಬಯಸಿದವರು.  ಜಾತೀಯತೆ, ಮೌಢ್ಯ ಕಂದಾಚಾರಗಳು ಸಮಾಜದಲ್ಲಿ ಪ್ರಚಲಿತವಾಗಿದೆ. ಅಸಮಾನತೆ ತೊಲಗಿ ಎಲ್ಲರೂ ಗೌರವದಿಂದ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ದಿಸೆಯಲ್ಲಿ ಬಸವಣ್ಣನವರು ಶ್ರಮಿಸಿದರು ಎಂದು ಹೇಳಿದ್ದಾರೆ.

ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ  ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನದೇ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು. ಬಡವರು ಬಡವರಾಗಿಯೇ ಉಳಿಯುವ ಹಾಗೂ ಶ್ರೀಮಂತರ ಕೂತು ತಿನ್ನುವ ವ್ಯವಸ್ಥೆ ಹೋಗಬೇಕು. ಅಧಿಕಾರ ಮತ್ತು ಸಂಪತ್ತು ಕೆಲವೇ ಜನರ ಕೈಯಲ್ಲಿ ಇರಬಾರದು, ಎಲ್ಲರಿಗೂ ಸಮಪಾಲು, ಸಮಬಾಳು ಎಂದು ಬಸವಾದಿ ಶರಣರು, ಅಂಬೇಡ್ಕರ್ ತಿಳಿಸಿದ್ದರು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!