spot_img
Saturday, December 7, 2024
spot_img

ಹೆಚ್‌ಎಸ್‌ಆರ್‌ಪಿ : ಆನ್‌ಲೈನ್‌ ಮೂಲಕ ನೀವೇ ಅರ್ಜಿ ಸಲ್ಲಿಸಿ, ಇಲ್ಲಿದೆ ಮಾಹಿತಿ !

ಜನಪ್ರತಿನಿಧಿ (ಬೆಂಗಳೂರು) : ಹಳೆ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ಡೆಡ್‌ಲೈನ್ ನೀಡಿದೆ. ಸುಲಭವಾಗಿ ನೀವೆ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್ ಅನ್ನು ಪಡೆಯಲು ಕರ್ನಾಟಕ ಸಾರಿಗೆ ಇಲಾಖೆಯ ವೆಬ್‌ಸೈಟ್‌ https://transport.karnataka.gov.in ಅಥವಾ www.siam.in ಅಥವಾ book my hsrp web ಅಥವಾ KARANATAKA RTO ವೆಬ್‌ಸೈಟ್ ಗೆ ಭೇಟಿ ನೀಡಬೇಕು.

ಬುಕ್‌ ಮೈ ಹೆಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ವಾಹನದ ಕಂಪೆನಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ಅಲ್ಲಿ ನಿಮ್ಮ ವಾಹನದ ಡಿಟೇಲ್ಸ್ ಕೇಳಿರುವುದನ್ನು ಭರ್ತಿ ಮಾಡಿದ ನಂತರ ಡೀಲರ್ ಲೊಕೇಶನ್‌ ನಿಮ್ಮ ಅನುಕೂಲಕ್ಕೆ ತಕ್ಕಂತೆ ಸೆಲೆಕ್ಟ್ ಮಾಡಿ.

ಹೆಚ್‌ಎಸ್‌ಆರ್‌ಪಿಗೆ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ. ನಿಮ್ಮ ಗೂಗಲ್ಪೇ ಫೋನ್ಪೇ ಹಾಗೂ ವಿವಿಧ ಆನ್‌ಲೈನ್ ಪೇಮೆಂಟ್ ಕೂಡಾ ಮಾಡಬಹುದಾಗಿದೆ. ಇವೆಲ್ಲ ಆದ ನಂತರದಲ್ಲಿ ವಾಹನದ ಮಾಲೀಕರ ಮೊಬೈಲ್ ನಂಬರ್‌ಗೆ ಒಟಿಪಿ ಬರುತ್ತದೆ.

ಮಾಲೀಕರು ತಮ್ಮ ಸಮಯ ನೋಡಿಕೊಂಡು ನಂಬರ್ ಪ್ಲೇಟ್ ವಾಹನಕ್ಕೆ ಪಡೆಯಲು ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದಾಗಿದೆ. ಅದಾದ ಬಳಿಕ ವಾಹನದ ಮಾಲೀಕರು ನಿಗದಿ ಮಾಡಿಕೊಂಡ ದಿನಾಂಕ ಮತ್ತು ಸಮಯಕ್ಕೆ ಅವರ ವಾಹನದ ಶೋ ರೂಮ್ ಅಥವಾ ಡೀಲರ್‌ ಬಳಿ ಹೋಗಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ವಾಹನಕ್ಕೆ ಅಳವಡಿಸಬಹುದಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!