spot_img
Saturday, March 7, 2026
spot_img

ರಾಜ್ಯಸಭಾ ಚುನಾವಣೆ : ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಸುಪ್ರೀಂ ಸೋನಿಯಾ ಗಾಂಧಿ !

ಜನಪ್ರತಿನಿಧಿ ( ನವ ದೆಹಲಿ) : ರಾಜಸ್ಥಾನದಿಂದ ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು(ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ. ಅವರು ಜೈಪುರದಿಂದ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕಾರ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದ್ದರು.

ಈ ಭಾರಿ ಲೋಕಸಭಾ ಚುನಾವಣೆಗೆ ಸೋನಿಯಾ ಗಾಂಧಿ ಸ್ಪರ್ಧಿಸುವುದಿಲ್ಲ ಎಂದು ವರದಿಗಳು ಹೇಳಿದ್ದವು. ಆರೋಗ್ಯ ಸಮಸ್ಯೆಯ ಕಾರಣಗಳಿಂದಾಗಿ ತಮ್ಮ ಲೋಕಸಭೆ ಕ್ಷೇತ್ರಕ್ಕೆ ನಿಯಮಿತವಾಗಿ ಭೇಟಿ ನೀಡುವುದು ಕಷ್ಟಕರವಾಗಿದೆ. ಆ ಕಾರಣದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ನಿರ್ಧರಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದ್ದು, ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದರು ಮತ್ತು ಸೋನಿಯಾ ಯಾವಾಗಲೂ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌; ನಲ್ಲಿ ಪೋಸ್ಟ್‌ ಮಾಡಿದ ಗೆಲ್ಹೋಟ್‌,  “ಪ್ರಧಾನಿ ಹುದ್ದೆಯನ್ನು ತ್ಯಜಿಸಿದ ಕಾಂಗ್ರೆಸ್ ಪಕ್ಷದಿಂದ ಗೌರವಾನ್ವಿತ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರನ್ನು ನಾಮನಿರ್ದೇಶನ ಮಾಡುವ ಹೇಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!