spot_img
Saturday, March 7, 2026
spot_img

ರಾಜ್ಯಸಭಾ ಚುನಾವಣೆ : ಮೂರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ | ಎಐಸಿಸಿ ಖಜಾಂಚಿ ಅಜಯ್ ಮಕೆನ್ ಕಣಕ್ಕೆ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಸಭಾ ಚುನಾವಣೆಗೆ ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ಕಾಂಗ್ರೆಸ್‌ ನೀಡಿ ಹುಬ್ಬೇರಿಸುವಂತೆ ಮಾಡಿದೆ.

ಜಿ.ಸಿ.ಚಂದ್ರಶೇಖರ್‌ ಹಾಗೂ ನಾಸೀರ್ ಹುಸೇನ್‌ ಗೆ ಮತ್ತೊಮ್ಮೆ ಕಾಂಗ್ರೆಸ್ ರಾಜ್ಯಸಭಾ ಟಿಕೆಟ್‌ ನೀಡಿದೆ. ಇನ್ನು ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ.

ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘ ಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿತ್ತು. 

ನಾಳೆ(ಫೆಬ್ರವರಿ 15, ಗುರುವಾರ) ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಕಾಂಗ್ರೆಸ್‌ನಿಂದ ಈ ಮೂವರು ನಾಯಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಅಜಯ್ ಮಾಕೆನ್ ಇಂದು(ಬುಧವಾರ) ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹತಿ ಇದೆ. ನಾಳೆ ಬೆಳಗ್ಗೆ ಅಜಯ್ ಮಕೆನ್, ಜಿಸಿ ಚಂದ್ರಶೇಖರ ಹಾಗೂ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಮಾಹಿತಿ ನೀಡಿದೆ.

ಈಗಿನ ಸಂಖ್ಯಾಬಲದ ಆಧಾರದ ಮೇಲೆ ನೋಡುವುದಾದರೆ ಕಾಂಗ್ರೆಸ್ಸಿನಿಂದ ಮೂವರು, ಬಿಜೆಪಿಯಿಂದ ಒಬ್ಬರು ನಿರಾಯಾಸವಾಗಿ ಗೆಲ್ಲಬಹುದಾಗಿದೆ. 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!