spot_img
Saturday, March 7, 2026
spot_img

ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕಾಂಗ್ರೆಸ್‌ ತೊರೆದು ಬಿಜೆಪಿ  ಸೇರ್ಪಡೆ !

ಜನಪ್ರತಿನಿಧಿ (ನವ ದೆಹಲಿ) : ಲೋಕಸಭೆ ಚುನಾವಣೆಗೆ  ಸನಿಹವಾಗುತ್ತಿರುವುದರ ನಡುವೆ ಮಾಜಿ ಪ್ರಧಾನಿ, ಅಪ್ಪಟ ಕಾಂಗ್ರೆಸ್ಸಿಗ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕಾಂಗ್ರೆಸ್‌ ತೊರೆದು ಬಿಜೆಪಿ  ಸೇರ್ಪಡೆಗೊಂಡಿದ್ದಾರೆ.  ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನಾ ಕಾಂಗ್ರೆಸ್‌ಗೆ ಮತ್ತೊಮ್ಮೆ ಭಾರಿ ಹಿನ್ನಡೆಯಾದಂತಾಗಿದೆ.

ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ವಿಭಾಕರ್‌ ಶಾಸ್ತ್ರಿ ಅವರು ಉತ್ತರ ಪ್ರದೇಶದ ಲಖನೌನಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಉಪ ಮುಖ್ಯಮಂತ್ರಿ ಬ್ರಜೇಶ್‌ ಪಾಠಕ್‌ ವಿಭಾಕರ್‌ ಶಾಸ್ತ್ರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಶಾಸ್ತ್ರಿ, “ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜೈ ಜವಾನ್‌, ಜೈ ಕಿಸಾನ್‌ ಎಂಬ ಘೋಷಣೆಯು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಾಕಾರವಾಗಲಿದೆ ಎಂಬ ನಂಬಿಕೆಯಿದೆʼ ಎಂದು ಪ್ರಧಾನಿಯನ್ನು ಹೊಗಳಿದರು.

ಕಾಂಗ್ರೆಸ್‌ಗೆ ರಾಜೀನಾಮೆ ನೀಡುವ ಕುರಿತು ವಿಭಾಕರ್‌ ಶಾಸ್ತ್ರಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು.

ಮಹಾರಾಷ್ಟ್ರದಲ್ಲಿ ಅಶೊಕ್‌ ಚೌಹಾಣ್‌ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ ಬಳಿಕ ಅವರಿಗೆ ರಾಜ್ಯಸಭೆ ಟಿಕೆಟ್‌ ನೀಡಲಾಗಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!