spot_img
Saturday, March 7, 2026
spot_img

ದೆಹಲಿಗೆ ಹೋಗಿ ರಾಜ್ಯದ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡಿದೆ : ವಿಜಯೇಂದ್ರ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು ) : ತನ್ನ ವೈಫಲ್ಯವನ್ನು ಮುಚ್ಚಿಹಾಕುವ ಸಲುವಾಗಿ ದೆಹಲಿಗೆ ಹೋಗಿ ರಾಜ್ಯದ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ. ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ, ಹಿಂದೆ ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರವಿದ್ದಾಗ ರಾಜ್ಯಕ್ಕೆ ಹತ್ತು ವರ್ಷದಲ್ಲಿ ಬಂದ ಹಣ ಎಂಬತ್ತಾರು ಸಾವಿರ ಕೋಟಿ ಬಂದಿದ್ದಷ್ಟೇ, ಆದರೇ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎರಡು ಲಕ್ಷ ಎಂಬತ್ತೈದು ಸಾವಿರ ಕೋಟಿ ಅನುಧಾನ ರಾಜ್ಯಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಯಾವ ಶಾಸಕರಿಗೆ ಅಭಿವೃದ್ಧಿಗಾಗಿ ಅನುದಾನ ನೀಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸ ಮಾಡಬೇಕಿದೆ. ಶಾಸಕರಿಗೆ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಬೇಕಿದೆ. ಹದಿನಾರನೇ ಬಜೆಟ್‌ನನ್ನು ಮಂಡನೆ ಮಾಡುತ್ತಿರುವ ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ನೀಡಬೇಕಾಗಿರುವ ಅನುದಾನ ಬಿಡುಗಡೆ ಮಾಡಿ ಅವರೊಬ್ಬ ಉತ್ತಮ ಆಡಳಿತಗಾರ ಎಂದು ಸಾಬೀತು ಮಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!