spot_img
Friday, March 21, 2025
spot_img

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು !

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ದೇವೇಗೌಡ ಅವರಿಗೆ ತೀವ್ರ ಉಸಿರಾಟ ಸಮಸ್ಯೆ ಕಂಡು ಬಂದ ಕಾರಣದಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎಚ್‌ಡಿ ದೇವೇಗೌಡ ಅವರಿಗೆ 90 ವರ್ಷ ವಯಸ್ಸಾಗಿತ್ತು. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಅಲ್ಲದೇ ಅವರು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೋಗಿಬಂದಿದ್ದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!