spot_img
Wednesday, December 4, 2024
spot_img

ಇಸ್ಲಾಂ ಧರ್ಮ ಅಳಿಯದೆ ಜಗತ್ತಿಗೆ ನೆಮ್ಮದಿ ಇಲ್ಲ, ಸಿದ್ದರಾಮಯ್ಯಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯವಿದೆ? : ಅನಂತಕುಮಾರ್‌ ಹೆಗಡೆ ವಿವಾದಾತ್ಮಕ ಹೇಳಿಕೆ

ಜನಪ್ರತಿನಿಧಿ (ಉತ್ತರ ಕನ್ನಡ) : ಸಿಎಂ ಸಿದ್ಧರಾಮಯ್ಯ ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದಲ್ಲಿ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯವಿದೆ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರಿಯಲು ಸಾಧ್ಯವಿದೇಯೇ ಎಂದು ಸಂಸದ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಹೆಗಡೆ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿ”ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು. ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.

ಇಸ್ಲಾಂ ಧರ್ಮ ಅಳಿಯದೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ ಹೆಗಡೆ

“ಮಸೀದಿಯ ಬಗ್ಗೆ ಹೇಳಿದ್ದ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಸಿದ್ಧರಾಮಯ್ಯ ಅವರಿಗೆ ಧನ್ಯವಾದ ಹೇಳಿದ್ದೇನೆ. ತುಂಬಾ ವರ್ಷದಿಂದ ಯಾವುದೇ ಕೇಸ್ ಇರಲಿಲ್ಲ. ಒಂದು ರೀತಿಯ ಮುಜುಗುರ ಉಂಟಾಗಿತ್ತು. ಏನೋ ಕಳೆದುಕೊಂಡಂತೆ ಅನಿಸುತ್ತಿತ್ತು. ಈಗ ಪುನಃ ವಾಪಾಸ್ ಬಂದ ಅನುಭವ ಆಗುತ್ತಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ. ನಾವು ಇಲ್ಲದೇ ಹೋದಲ್ಲಿ ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದೂ ಧರ್ಮ, ಭಾರತ ದೇಶ ಉಳಿಯಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಾಗಿದೆ. ಬಿಜೆಪಿ ಅಧಿಕಾರಲ್ಲಿ ಇದ್ದಲ್ಲಿ ಮಾತ್ರ ದೇಶ ಉಳಿಯಲಿದೆ” ಎಂದು ಅವರು ಹೇಳಿದ್ದಾರೆ.

“ಭಾರತೀಯ ಜನತಾ ಪಕ್ಷ, ಸಂಘ ಪರಿವಾರ ಇದ್ದರೆ ಮಾತ್ರ ದೇಶ ಉಳಿಯುತ್ತದೆ. ಹಿಂದುತ್ವವು ನಮ್ಮ ದೇಶದ ಉಸಿರಾಗಿದೆ. ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲವಾಗಿದೆ. ನನ್ನ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಪ್ರಚಾರಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಸಾಮಾಜಿಕ, ಸಾಂಸ್ಕೃತಿಕವಾಗಿ ಎಲ್ಲ ದೃಷ್ಟಿಯಿಂದ ಅಭಿವೃದ್ಧಿ ಹೊಂದಿದಾಗ ಮಾತ್ರ ಸಂಪೂರ್ಣ ಅಭಿವೃದ್ಧಿ ಹೊಂದಿದಂತೆ” ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!