Sunday, September 8, 2024

2024-2025ನೇ ಸಾಲಿನ ರಾಜ್ಯ ಬಜೆಟ್ : ಮೀನುಗಾರರ ಕಲ್ಯಾಣಕ್ಕೆ ರಾಜ್ಯ ಬಜೆಟ್‌ ನಲ್ಲಿ ಪ್ರಾಧಾನ್ಯ

ಜನಪ್ರತಿನಿಧಿ (ರಾಜಧಾನಿ, ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ದಾಖಲೆಯ 15ನೇ ಬಜೆಟ್‌ ಮಂಡನೆ ಮಾಡಿದ್ದಾರೆ, ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಎರಡನೇಯ ಅವಧಿಯ ಎರಡನೇ ಬಜೆಟ್‌ ಮಂಡಿಸಿದ್ದಾರೆ.

ಮೀನುಗಾರಿಕಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷದಲ್ಲಿ ಒಟ್ಟು ರೂ. ಮೂರು ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮಾಡಲಾಗುವುದು ಎಂದರು. ಮಾತ್ರವಲ್ಲದೇ, ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್‌ ಖರೀದಿಗೆ ಏಳು ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಇನ್ನು, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು ರೂ. ಮೂರು ಸಾವಿರಕ್ಕೆ ಹೆಚ್ಚಳ ಹಾಗೂ ವಿವಿಧ ವಸತಿ ಯೋಜನೆಗಳಡಿ ಹತ್ತು ಸಾವಿರ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಕ್ರಮವಹಿಸುವುದಾಗಿ ಬಜೆಟ್‌ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!